ಬೆಂಗಳೂರು: ಆಪರೇಷನ್ ಸಿಂಧೂರ್ (Operation Sindoor) ಕೇವಲ ಒಂದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರ್ ಪ್ರತಿಕಾರದ ದಾಳಿ ಕುರಿತು ಟ್ವಿಟ್ ಮಾಡಿರುವ ಅವರು, ಭಾರತ ಹೊಡೆದಾಗ ಜಗತ್ತು ನೋಡುತ್ತದೆ… ಮತ್ತು ಸ್ವಲ್ಪ ನಡುಗುತ್ತದೆ.
ಆಪರೇಷನ್ ಸಿಂಧೂರ್ ಕೇವಲ ಒಂದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ🙏
— Nikhil Kumar (@Nikhil_Kumar_k) May 7, 2025
ಭಾರತ ಹೊಡೆದಾಗ ಜಗತ್ತು ನೋಡುತ್ತದೆ… ಮತ್ತು ಸ್ವಲ್ಪ ನಡುಗುತ್ತದೆ.
ಆಪರೇಷನ್ ಸಿಂಧೂರ ಕೇವಲ ದಾಳಿಯಲ್ಲ, ಇದು ಭಾರತದ ಸಾರ್ವಭೌಮತ್ವದ ಸಂಕೇತ. ಭಾರತೀಯ ಸೇನೆಯ ಧೈರ್ಯ ಮತ್ತು ಪ್ರಧಾನಿ ಶ್ರೀ @narendramodi ಜಿ ಅವರ ನಿರ್ಭೀತ ನಾಯಕತ್ವಕ್ಕೆ ನನ್ನ… pic.twitter.com/xXhNUjtyxo
ಆಪರೇಷನ್ ಸಿಂಧೂರ ಕೇವಲ ದಾಳಿಯಲ್ಲ, ಇದು ಭಾರತದ ಸಾರ್ವಭೌಮತ್ವದ ಸಂಕೇತ. ಭಾರತೀಯ ಸೇನೆಯ ಧೈರ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಜಿ ಅವರ ನಿರ್ಭೀತ ನಾಯಕತ್ವಕ್ಕೆ ನನ್ನ ನಮನಗಳು. ನವಭಾರತವು ಎಚ್ಚರಿಸುವುದಷ್ಟೇ ಅಲ್ಲ, ಅದು ತನ್ನ ಕರ್ತವ್ಯ ನಿರ್ವಹಿಸುತ್ತದೆ ಎಂದಿದ್ದಾರೆ.