ಬೆಂಗಳೂರು: ಪಹಲ್ಲಾಮ್ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ದಾಳಿ ನಡೆಸಿ, ತಿರುಗೇಟು ನೀಡಿದೆ.
ಭಾರತೀಯ ಸೇನೆಯ ಈ ಯಶಸ್ವಿ ದಾಳಿಯನ್ನು ದೇಶಾದ್ಯಂತ ಸಂಭ್ರಮಿಸಲಾಗುತ್ತಿದೆ, ಇದರ ಮುಂದುವರಿದ ಭಾಗವಾಗಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಇಲಾಖೆ ಆದೇಶಿಸಲಾಗಿದೆ.
ಈ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಾಲಿಂಗಾ ರೆಡ್ಡಿ ಅವರು, ಪಹಲ್ಗಾಮ್ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಇದರ ಅಂಗವಾಗಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಆದೇಶ ನೀಡಿದ್ದೇನೆ ಎಂದಿದ್ದಾರೆ.
ಅದರಂತೆ ರಾಜ್ಯದ ಸುಮಾರು 35,000 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಲಾಗಿದೆ.
ಈ ಕುರಿತು ಮುಜರಾಯಿ ಇಲಾಖೆ ಆಯುಕ್ತರಾದ ಎಂ.ವಿ. ವೆಂಕಟೇಶ್, ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಮ್ಮ ಸೈನಿಕರಿಗೆ ಶಕ್ತಿ ತುಂಬಿವಂತೆ ಬೇಡಿಕೊಳ್ಳುವಂತೆ ತಿಳಿಸಿದ್ದಾರೆ.