Today is DCM DK Shivakumar's birthday; Wow.. Fans are in awe of AI creation

ಪಾಕ್ ಉಗ್ರ ತಾಣಗಳ ಮೇಲೆ ಸಿಂಧೂರ ದಾಳಿ: ಡಿಸಿಎಂ ಡಿಕೆ ಶಿವಕುಮಾರ್ ಮುಕ್ತಕಂಠದ ಶ್ಲಾಘನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು, ‘ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ ಮೂಲಕ ಸ್ವಾಗತಿಸಿದ್ದಾರೆ.

“ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ (Operation Sindoora) ಉತ್ತಮ ಪ್ರತ್ಯುತ್ತರವಾಗಿದೆ” ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ” ಎಂದು ತಿಳಿಸಿದರು.

ಕರ್ನಾಟಕದ ಪ್ರಜೆಗಳು ಪೆಹಲ್ಗಮ್ ದಾಳಿಯಲ್ಲಿ ಮೃತಪಟ್ಟಿದ್ದರ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ” ಎಂದರು.

ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬದವರು ಈ ಆಪರೇಷನ್ ನಿಂದ ನೆಮ್ಮದಿ ಪಡೆಯುವರೇ?, ವಿರೋಧ ಪಕ್ಷ ಕೂಡ ಸರ್ಕಾರದ ಬೆನ್ನಿಗೆ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಹೌದು, ನಾವು ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ.

ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ” ಎಂದು ತಿಳಿಸಿದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!