DCM DK Shivakumar appeals to the Center to provide necessary assistance and cooperation

ನಿತಿನ್ ಗಡ್ಕರಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್..!

ನವದೆಹಲಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು, ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಭಿವೃದ್ಧಿ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದರು.

ಹೆದ್ದಾರಿ 209ರ ಉನ್ನತೀಕರಣ

ಹಾಲಿ ನಾಲ್ಕು ಪಥ ಇರುವ ಹೆದ್ದಾರಿ 209 (ಬೆಂಗಳೂರು-ಕನಕಪುರ) ಅನ್ನು ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ಜತೆಗೆ ಆರು ಪಥಗಳಿಗೆ ಉನ್ನತೀಕರಣಗೊಳಿಸಬೇಕು. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಈ ಪ್ರದೇಶದ ಅಭಿವೃದ್ಧಿಯಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಗಣನೀಯ ಏರಿಕೆ ಕಂಡಿದೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು, ಸಂಚಾರಿ ಸುರಕ್ಷತೆ, ಕೈಗಾರಿಕಾ ಪ್ರದೇಶದ ವಾಹನಗಳ ಸುಗಮ ಸಂಚಾರಕ್ಕೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕಗ್ಗಲಿಪುರ ಟೋಲ್ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರವಿಶಂಕರ ಗುರೂಜಿ ಆಶ್ರಮದಿಂದ ಕಗ್ಗಲಿಪುರ ಟೋಲ್ ವರೆಗಿನ 7 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಅಗತ್ಯ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದ್ದು, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಆಕ್ಷೇಪದಿಂದ ಈ ಯೋಜನೆ ಕಾಮಗಾರಿ ನಿಂತಿದೆ.

ಈ ಹೆದ್ದಾರಿಯಲ್ಲಿ ಈ ಭಾಗ ಬಾಟಲ್ ನೆಕ್ ನಂತಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ವಾಹನ ಸಂಚಾರ ಹೆಚ್ಚಾಗಿದ್ದು, ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ಈ ಕಾಮಗಾರಿ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಈ ಕಾಮಗಾರಿಗೆ ಎದುರಾಗಿರುವ ಅಡಚಣೆಯನ್ನು ನಿವಾರಿಸಿ, ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸಲು ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಪರಿಹಾರ ನಿಧಿ ಬಿಡುಗಡೆ

ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆ (NH 948A) ಡಾಬಸ್ ಪೇಟೆ, ಮಾಗಡಿ, ರಾಮನಗರ, ಹಾರೋಹಳ್ಳಿ ನಡುವೆ ಸಂಪರ್ಕ ವೃದ್ಧಿಸಲು ಹಾಗೂ ಮೂಲಸೌಕರ್ಯ ಒದಗಿಸಲು ಈ ಯೋಜನೆ ಮಹತ್ವದ್ದಾಗಿದೆ.

ಈ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು. ಈ ಯೋಜನೆ 2019ರಲ್ಲಿ ಆರಂಭವಾಯಿತಾದರೂ ಪರಿಹಾರ ಬಿಡುಗಡೆ ತಡವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಹೆಬ್ಬಾಳದಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ

ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಣ 35 ಕಿ.ಮೀ ಉದ್ದದ ಪ್ರದೇಶದಲ್ಲಿ ಅಪಾರವಾದ ಅಭಿವೃದ್ಧಿಯಾಗಿದ್ದು, ಅನೇಕ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳು ಸ್ಥಾಪನೆಯಾಗಿವೆ. ಹೀಗಾಗಿ ಈ ಭಾಗದಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ.

ಈಗಿರುವ ಎಲಿವೆಟೆಡ್ ಕಾರಿಡಾರ್ ನಡುವೆ ಟ್ರಾಫಿಕ್ ಸಿಗ್ನಲ್, ಪಾದಚಾರಿಗಳ ರಸ್ತೆ ದಾಟುವಿಕೆಯಿಂದ ಇಲ್ಲಿನ ಪ್ರಯಾಣಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಈ ಮಧ್ಯೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಹೆಬ್ಬಾಳ ಜಂಕ್ಷನ್ ನಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರು, ಸ್ಥಳೀಯ ವಾಹನಗಳು, ಕೈಗಾರಿಕಾ ವಲಯದ ದೊಡ್ಡ ವಾಹನಗಳ ಸಂಚಾರ ಸುಗಮವಾಗಲಿದೆ ಎಂದು ಮನವಿ ಮಾಡಲಾಗಿದೆ.

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!