ಟೆಸ್ಟ್ ಕ್ರಿಕೆಟ್‌ಗೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ವಿದಾಯ..!

Hitman Rohit Sharma bids farewell to Test cricket..!

ದೆಹಲಿ: ಭಾರತ ತಂಡದ ಹಿರಿಯ ಬ್ಯಾಟ್ಸ್‌ಮನ್ ಹಿಟ್‌ಮ್ಯಾನ್ ಎಂದೇ ಹೆಸರುವಾಸಿ ರೋಹಿತ್ ಶರ್ಮಾ (Rohit Sharma) ಬುಧವಾರ ತಮ್ಮ ಟೆಸ್ಟ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿದ್ದಾರೆ.

ಆ ಮೂಲಕ ಹಿಟ್‌ಮ್ಯಾನ್ ತಮ್ಮ ಕ್ರಿಕೆಟ್ ಅಭಿಮಾನಿಗಳಿಗೆ ದಂಗುಬಡಿಸಿದ್ದಾರೆ.

ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ಭಾರತ ತಂಡವು ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಹೀನಾಯವಾಗಿ ಸೋತಿತ್ತು, ಅದಾದ ಬಳಿಕ ಆಸ್ಟ್ರೇಲಿಯಾ ವಿರುದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿಯೂ ಟೀಮ್ ಇಂಡಿಯಾ ಸೋಲು ಅನುಭವಿಸಿ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಸ್ಟೋರಿ ಯಲ್ಲಿ ರೋಹಿತ್ ಶರ್ಮಾ ಈ ವಿಷಯವನ್ನು ಪ್ರಕಟಿಸಿದ್ದಾರೆ. 38ರ ವಯಸ್ಸಿನ ರೋಹಿತ್ ಶರ್ಮಾ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಆಡಿದ 67 ಪಂದ್ಯಗಳಿಂದ 4301 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಅವರು 12 ಶತಕಗಳು ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.

ರೋಹಿತ್ ಪೋಸ್ಟ್

ಟೆಸ್ಟ್ ಕ್ರಿಕೆಟ್‌ಗೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ವಿದಾಯ..!

‘ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆಂದು ನಿಮ್ಮ ಬಳಿ ಹೇಳಲು ಬಯಸುತ್ತಿದ್ದೇನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವುದು ದೊಡ್ಡ ಗೌರವವಾಗಿದೆ. ಕಳೆದ ವರ್ಷಗಳಲ್ಲಿ ನನಗೆ ಪ್ರೀತಿ, ಬೆಂಬಲ ನೀಡಿದ್ದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ.

ಏಕದಿನ ಕ್ರಿಕೆಟ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ಮುಂದುವರಿಯುತ್ತೇನೆ’ ಎಂದು ಹೇಳುವ ಮೂಲಕ ರೋಹಿತ್ ಟೆಸ್ಟ್ ಕ್ಯಾಪ್ ಅನ್ನು ಹಂಚಿಕೊಂಡಿದ್ದಾರೆ.

2022ರಲ್ಲಿ ಟೆಸ್ಟ್ ನಾಯಕತ್ವ: ವಿರಾಟ್ ಕೊಹ್ಲಿ 2022ರ ಆರಂಭದಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡಕ್ಕೆ ನಾಯಕನಾಗಿ ನೇಮಕಗೊಂಡಿದ್ದರು ಹಾಗೂ 2ನೇ ಆ ವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ತಂಡವನ್ನು ಹಿಟ್‌ಮ್ಯಾನ್ ಮುನ್ನಡೆಸಿದ್ದರು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಹಲವು ಟೆಸ್ಟ್ ಸರಣಿಗಳನ್ನು ಗೆದ್ದಿದೆ. ಆದರೆ, ಕಳೆದ 2 ಟೆಸ್ಟ್ ಸರಣಿ ಗಳಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು ಹಾಗೂ ನಾಯಕನಾಗಿಯೂ ಯಶಸ್ಸನ್ನು ಪಡೆದಿರಲಿಲ್ಲ.

ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿ ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯ ನಿಮಿತ್ತ ರೋಹಿತ್ ಅವರನ್ನು ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೈ ಬಿಡಲು ನಿರ್ಧರಿಸಿದೆ. ಆದರೆ ಅವರು ಏಕದಿನ ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]