Yettinahole water to reach plains districts soon: Chief Minister DK Shivakumar

ಎತ್ತಿನಹೊಳೆ ನೀರು ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರ: ಡಿಸಿಎಂ ಡಿಕೆ ಶಿವಕುಮಾರ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗೆ ನೆಲಮಂಗಲ ತಾಲ್ಲೂಕಿನ ಕರೇಗೌಡನಹಳ್ಳಿ ಕೆರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ರಾಜ್ಯದ ಮಹಾ ಜನತೆ 136 ಸೀಟುಗಳನ್ನು ಕೊಟ್ಟು ನಮ್ಮ ಸರ್ಕಾರವನ್ನು ಗೆಲ್ಲಿಸಿದ್ದೀರಿ ನಿಮಗೆ ಧನ್ಯವಾದಗಳು. ವೃಷಭಾವತಿ ನೀರನ್ನು ಬಹಳ ಹಿಂದೆಯೇ ಸಂಸ್ಕರಣ ಮಾಡಿ ಹರಿಯಲು ಬಿಡಬೇಕು ಎಂದು ಅಂದುಕೊಂಡಿದ್ದೇವು.

ರೈತರ ಬದುಕಿಗೆ ಏನಾದರೂ ಸಹಾಯ ಮಾಡಬೇಕು ರೈತರಿಗೆ ಸಂಬಳವಾಗಲಿ, ಪೆನ್ಷನ್, ಪಿಂಚಣಿಯ ಸೌಲಭ್ಯಗಳು ಇರುವುದಿಲ್ಲ. ರೈತರ ಉಳಿವಿಗಾಗಿ ಅವರ ಅನುಕೂಲಕ್ಕಾಗಿ ಸರ್ಕಾರ ಯೋಜನೆಯನ್ನು ರೂಪಿಸಿದೆ.

ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು. ವೃಷಭಾವತಿ ಯೋಜನೆಯು 1900 ಕೋಟಿ ರೂಗಳ ಯೋಜನೆಯಾಗಿದ್ದು. 148 ಟ್ಯಾಂಕ್ ಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಹಾಸನ ಭಾಗದಲ್ಲಿ ಅರಣ್ಯ ಪ್ರದೇಶ ಒತ್ತುವರಿ ಸಮಸ್ಯೆ ಆಗಿತ್ತು, ಆದಷ್ಟು ಶೀಘ್ರ ಬಗೆಹರಿಸಿ, ಈ ಭಾಗಕ್ಕೆ ಎತ್ತಿನಹೊಳೆಯ ನೀರು ತರಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ, ಬಯಲು ಸೀಮೆ ಪ್ರದೇಶಗಳಲ್ಲಿ ನೀರಿನ ಕೊರತೆ ನೀಗಿಸಲು ನಾನು ಕೇಂದ್ರದಲ್ಲಿ ಸಂಸತ್ ಸದಸ್ಯ ಆಗಿದ್ದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಯೋಜನೆ ಜಾರಿಗೆ ತರಲಾಯಿತು.

ವೃಷಭಾವತಿ ನೀರು ದೇವನಹಳ್ಳಿ, ದೊಡ್ಡಬಳ್ಳಾಪುರ ಭಾಗಕ್ಕೆ ಕೂಡ ಆದಷ್ಟು ಬೇಗ ಬರಲು ಡಿಪಿಆರ್ ಸಿದ್ದಪಡಿಸಿ ಪ್ರಸಕ್ತ ಸಾಲಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಎತ್ತಿನಹೊಳೆ ಯೋಜನೆಯು ಬಯಲು ಸೀಮೆ ರಾಜ್ಯಗಳ ಆಶಾಭಾವನೆ. ಮೊದಲು ಕುಡಿಯುವ ನೀರು ಸಿಗಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ, ನಂತರ ಕೆರೆ ತುಂಬಿಸಿ. ಒಂದು ವರ್ಷದಲ್ಲಿ ದೊಡ್ಡಬಳ್ಳಾಪುರ ಕ್ಕೆ ಎತ್ತಿನಹೊಳೆ ನೀರು ಬರುವ ವಿಶ್ವಾಸವಿದೆ. ಈ ಭಾಗದ ಶಾಸಕರ ಸಭೆ ಕರೆದು ಎತ್ತಿನಹೊಳೆ ಬಗ್ಗೆ ಚರ್ಚಿಸಿ, ಆದಷ್ಟು ಬೇಗ ನೀರು ಕೊಡಲು ಉಪಮುಖ್ಯಮಂತ್ರಿಗಳಲ್ಲಿ ಕೋರಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರೈತರ ಬಹುದಿನಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

2016 ರಲ್ಲಿ ಕೆ.ಸಿ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಎರಡೇ ವರ್ಷಗಳಲ್ಲಿ ಉದ್ಘಾಟನೆ ಮಾಡಿ ಕೋಲಾರ ಜಿಲ್ಲೆಯ ಭಾಗದ 400 ಕೆರೆಗಳಿಗೆ ನೀರು ಹರಿಸಲಾಗಿದೆ. 2017ರಲ್ಲಿ ಹೆಚ್.ಎನ್ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ 2019 ಕ್ಕೆ ಉಧ್ಘಾಟಿಸಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ನೀರು ಹೊರಿಸಲಾಗಿದೆ.

ವೃಷಭಾವತಿ ನೀರು ಹರಿಸುವ ಯೋಜನೆ ಅಡಿ 270 ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು. 4 ಟಿ.ಎಂ.ಸಿ ನೀರನ್ನು ಕೆರೆಗಳಿಗೆ ಹರಿಸಲಾಗುವುದು.
ಮುಂದಿನ 2 ವರ್ಷದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸಿದ ನಂತರ ಅಂತರ್ಜಲ ಮಟ್ಟ ಹೆಚ್ಚಾಗಿ, ರೈತರು ಕೃಷಿ ತೋಟಗಾರಿಕೆ ಹೈನುಗಾರಿಕೆ ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ. ಬರಡು ಭೂಮಿ ಈಗ ಕೃಷಿ ಭೂಮಿ ಆಗಿ ಮಾರ್ಪಾಡಾಗಿದೆ. ಇದು ರೈತರ ಮೇಲಿನ ನಮ್ಮ ಸರ್ಕಾರ ಬದ್ಧತೆ ಎಂದರು.

ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕರಾದ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಶಾ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!