ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ

Pakistan has a connection to the coastal area: R.Ashoka

ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ತಿಳಿಸಿದರು.

ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ.

ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್‌ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ.

ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವವರಿಗೆ ಆಪರೇಶನ್‌ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!