ಬೆಂ.ಗ್ರಾ.ಜಿಲ್ಲೆ: 2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆ-2 ಅನ್ನು ಮೇ 26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಗೆ ನೊಂದಾಯಿಸಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹಾಗೂ ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆ-1ರಲ್ಲಿ ನೊಂದಾಯಿಸಿಕೊಂಡು ಪರೀಕ್ಷೆಗೆ ಗೈರಾಗಿದ್ದವರು, ಪೂರ್ಣಗೊಳಿಸದೆ ಇರುವ ಮತ್ತು ಹಿಂದಿನ ಸಾಲಿನಲ್ಲಿ ಅನುತ್ತಿರ್ಣರಾದ ಹಾಗೂ ಫಲಿತಾಂಶವನ್ನು ಉತ್ತಮಗೊಳಿಸಿಕೊಳ್ಳಲು ಇದು ಸೂಕ್ತ ಸಮಯವಾಗಿದೆ.
ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಜಾಲತಾಣದ ಮೂಲಕ ಲಾಗಿನ್ ಮಾಡಿಕೊಂಡು ಪರೀಕ್ಷೆ-2 ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪರೀಕ್ಷೆ-2 ರ ನೋಂದಣಿ ಮತ್ತು ಇತ್ಯಾದಿ ವಿಷಯಗಳ ಕುರಿತು ಸಹಾಯವಾಣಿ ಸಂಖ್ಯೆ 080-23310075 ಮತ್ತು 080-23310076 ಇದಕ್ಕೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)