Tiranga Yatra held in Bengaluru to show support for the Indian Army

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆ.. ಸಾರ್ವಜನಿಕರಿಂದ ಭಾರಿ ಬೆಂಬಲ

ಬೆಂಗಳೂರು: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು.

ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ತಿರಂಗಾ ಯಾತ್ರೆ ನಡೆಸಲಾಯಿತು.

ಇದು ಪಕ್ಷಾತೀತ ಯಾತ್ರೆಯಾಗಿದ್ದರಿಂದ ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಂಘ ಸಂಸ್ಥೆಗಳು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು.

ಈ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ, ತ್ರಿವರ್ಣ ಧ್ವಜ ಹಿಡಿದು ಭಾರತ ಹಾಗೂ ಸೈನಿಕರ ಪರ ಘೋಷಣೆಗಳನ್ನು ಕೂಗಿದರು.

ಆ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ನಿಲ್ಲುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ ಎಂಬ ಸಂದೇಶ ರವಾನಿಸಲಾಯಿತು.

ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

“ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ನಿನ್ನೆ ರಾತ್ರಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡಿರುವ ಬಗ್ಗೆ ಕೇಳಿದಾಗ, “ದೇಶ ಇದನ್ನು ಸಮರ್ಥವಾಗಿ ಎದುರಿಸಲಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯಲಾಗಿತ್ತೋ, ಅದೇ ರೀತಿ ಈ ಬಾರಿಯೂ ಭಾರತ ಈ ಪರಿಸ್ಥಿತಿಯನ್ನು ಎದುರಿಸಿ ಗೆಲ್ಲಲಿದೆ” ಎಂದು ತಿಳಿಸಿದರು.

ತಿರಂಗಾ ಯಾತ್ರೆ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ ಜೈ ಹಿಂದ್ ತಿರಂಗ ಯಾತ್ರೆ ಆಯೋಜಿಸಲಾಗಿತ್ತು. ನಮ್ಮ ಸೇನೆಯ ಯೋಧರು ದೇಶ ರಕ್ಷಣೆಗೆ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ತೀರ್ಮಾನವನ್ನು ಎಲ್ಲರೂ ಒಟ್ಟಾಗಿ ಬೆಂಬಲಿಸಬೇಕು. ಹೀಗಾಗಿ ಈ ಯಾತ್ರೆ ನಡೆಸಲಾಗಿದೆ. ಇದಕ್ಕೆ ಸಮಾಜದ ಎಲ್ಲಾ ವರ್ಗದವರನ್ನು ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿತ್ತು. ಈ ಯಾತ್ರೆಗೆ ಕರೆ ಕೊಟ್ಟ ಅಲ್ಪಾವಧಿಯಲ್ಲಿ ಎಲ್ಲಾ ವರ್ಗದ ಜನರು ಭಾರಿ ಪ್ರಮಾಣದಲ್ಲಿ ಆಗಮಿಸಿರುವುದಕ್ಕೆ ಧನ್ಯವಾದಗಳು” ಎಂದು ತಿಳಿಸಿದರು.

ಭಯೋತ್ಪಾದನೆಗೆ ಇತಿಶ್ರೀ ಹಾಡಲು ಇದು ಸೂಕ್ತ ಸಮಯವೇ ಎಂದು ಕೇಳಿದಾಗ, “ನಮ್ಮ ಸೇನೆಯವರು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಬಹಳ ಹೆಮ್ಮೆ ಇದೆ. ಸೈನಿಕರು ನಮ್ಮ ಬಾವುಟವನ್ನು ಉತ್ತುಂಗದಲ್ಲಿ ಹಾರುವಂತೆ ಮಾಡಿದ್ದಾರೆ. ಅವರಿಗೆ ನಾವೆಲ್ಲರೂ ಒಟ್ಟಾಗಿ ಬೆಂಬಲ ಸೂಚಿಸಬೇಕು. ಭಯೋತ್ಪಾದನೆ ನಿರ್ಮೂಲನೆಯಾಗಬೇಕು” ಎಂದರು.

ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಪ್ರವೇಶ ಮಾಡಬೇಕೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಈಗ ಚರ್ಚೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸೇನೆ ಈ ವಿಚಾರವಾಗಿ ತೀರ್ಮಾನ ಕೈಗೊಳ್ಳಲಿದೆ” ಎಂದು ತಿಳಿಸಿದರು.

ರಾಜಕೀಯ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="118314"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!