ನವದೆಹಲಿ: ಪಹಲ್ಗಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಗೆ ಕದನ ವಿರಾಮ ಘೋಷಿಸಲಾಗಿದೆ.
ಈ ಕುರಿತಂತೆ ಕಳೆದ ರಾತ್ರಿಯಿಂದ ನಡೆಸಲಾದ ಸಂಧಾನ ಯಶ್ವಿಯಾಗಿದ್ದು, ಕದನ ವಿರಾಮಕ್ಕೆ ಭಾರತ ಒಪ್ಪಿಗೆ ನೀಡಿದೆ.
ಸಂಜೆ 5 ಗಂಟೆಯ ಬಳಿಕ ಪಾಕಿಸ್ತಾನ ಮತ್ತು ಭಾರತ ಎರಡು ಕಡೆಯಿಂದ ಎಲ್ಲಾ ರೀತಿಯ ದಾಳಿಯನ್ನು ನಿಲ್ಲಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ತಿಳಿಸಿದ್ದಾರೆ.
ಮುಂದಿನ ನಡೆ ಕುರಿತು ಮೇ.12 ರಂದು 12 ಗಂಟೆಗೆ ಎರಡು ಕಡೆಯ ಸೇನಾ ಮುಖ್ಯಸ್ಥರು ಮಹತ್ವದ ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಕೂಡ ಕದನ ವಿರಾಮದ ಕುರಿತು ಸ್ಪಷ್ಟನೆ ನೀಡಿದೆ.
ಇನ್ನೂ ಕೆಲವೇ ನಿಮಿಷಗಳಲ್ಲಿ ರಕ್ಷಣಾ ಇಲಾಖೆ ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಈ ಬೆಳವಣಿಗೆಗೂ ಮುನ್ನಾ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವಿಟ್ ಮಾಡಿದ್ದು, ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ಸುದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನವು ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ.
ಕಾಮನ್ ಸೆನ್ಸ್ ಮತ್ತು ಗ್ರೇಟ್ ಇಂಟೆಲಿಜೆನ್ಸ್ ಬಳಸಿದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದಲ್ಲಿ ನಿಮ್ಮ ಗಮನಕ್ಕೆ ಧನ್ಯವಾದಗಳು ಎಂದಿದ್ದಾರೆ.
