ನವದೆಹಲಿ: ಆಪರೇಷನ್ ಸಿಂಧೂರ (Operation Sindhoora) ಕಾರ್ಯಾಚರಣೆ ಅಡಿಯಲ್ಲಿ ಭಾರತೀಯ ಸೇನೆಯು ಭಯೋತ್ಪಾದಕ ಉಡಾವಣಾ ನೆಲೆಗಳನ್ನು ಪುಡಿಪುಡಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್‌ನ ಹಲವಾರು ನಗರಗಳಲ್ಲಿ 2025 ರ ಮೇ 08 ಮತ್ತು 09 ರ ರಾತ್ರಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದ ದುಸ್ಸಾಹಸಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸೇನೆಯು ಭಯೋತ್ಪಾದಕ ಉಡಾವಣಾ ನೆಲೆಗಳ ಮೇಲೆ ಸಂಘಟಿತ ಗುಂಡಿನ ದಾಳಿ ನಡೆಸಿ, ಅವುಗಳನ್ನು ನಾಶಮಾಡಿದೆ.
ನಿಯಂತ್ರಣ ರೇಖೆಯ ಬಳಿ ಇರುವ ಭಯೋತ್ಪಾದಕ ಉಡಾವಣಾ ನೆಲೆಗಳು ಹಿಂದೆ ಭಾರತೀಯ ನಾಗರಿಕರು ಮತ್ತು ಭದ್ರತಾ ಪಡೆಗಳ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವ ಕೇಂದ್ರವಾಗಿತ್ತು.
ಭಾರತೀಯ ಸೇನೆಯ ತ್ವರಿತ ಮತ್ತು ನಿರ್ಣಾಯಕ ಕ್ರಮವು ಭಯೋತ್ಪಾದಕ ಮೂಲಸೌಕರ್ಯ ಮತ್ತು ಸಾಮರ್ಥ್ಯಗಳಿಗೆ ಗಮನಾರ್ಹ ಹೊಡೆತ ನೀಡಿದೆ.