Complaint against Chakravarti Sulibele..!

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು..!

ಬೆಂಗಳೂರು: ಬೆಂಗಳೂರು ನಗರದ ಮೇಲೂ ಪಾಕಿಸ್ತಾನ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಹೇಳಿಕೆ ನೀಡಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಆರೋಪದಡಿಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದೂರು ದಾಖಲಿಸಲಾಗಿದೆ.

ಶನಿವಾರ ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಎಸ್.ಮನೋಹರ್, ನಿರಂತರವಾಗಿ ಸುಳ್ಳು ಹೇಳಿಕೆ, ತಪ್ಪು ಮಾಹಿತಿ ಪ್ರಚಾರ ಮಾಡುವ ಮೂಲಕ ಸುದ್ದಿಯಾಗುತ್ತಿರುವ ಚಕ್ರವರ್ತಿ ಸೂಲಿಬೆಲೆ, ಇತ್ತೀಚೆಗೆ ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿ ಜನರಲ್ಲಿ ಭಯವನ್ನು ಹುಟ್ಟಿಸುವ ಯತ್ನ ಮಾಡಿದ್ದರು ಎಂದರು.

ಅಷ್ಟು ಮಾತ್ರವಲ್ಲದೆ ಪಾಕಿಸ್ತಾನದ ಉಗ್ರರ ಜತೆ ಭಾರತದ ಏಜೆಂಟ್‌‌ಗಳು ಸಂಪರ್ಕದಲ್ಲಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಹೇಳಿಕೆ ನೀಡಿ ದೇಶದ ಗೌಪ್ಯ ವಿಚಾರಗಳನ್ನು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೇರೆ ಅಲ್ಲ, ಪಾಕಿಸ್ತಾನ ಬೇರೆ ಅಲ್ಲ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳನ್ನು ಖಂಡಿಸಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸಬೇಕು ಎಂದು ಎಸ್. ಮನೋಹರ್ ಆಗ್ರಹಿಸಿದರು.

ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಿರಂತರವಾಗಿ ದಾಳಿ ನಡೆಸುತ್ತಿದೆ ಹಾಗೂ ಭಯೋ ತ್ಪಾದಕರ ಅಡಗು ತಾಣಗಳನ್ನು ಧ್ವಂಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಚಕ್ರವರ್ತಿ ಸೂಲಿಬೆಲೆ, ಭಾರತದ ಸೈನಿಕರ ಆತ್ಮಸ್ಥೆಯ ರ್ಯ ವನ್ನು ಕುಗ್ಗಿ ಸುವಂತಹ ಭಾಷಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆತನ ವಿರುದ್ದ ಕೂಡಲೇ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು.

ಪ್ರತಿ ಬಾರಿಯೂ ಸಹ ಹಿಂದೂ-ಮುಸ್ಲಿಮ್ ಹಾಗೂ ಭಾರತ-ಪಾಕಿಸ್ತಾನ ಎಂಬ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ. ಸುಳ್ಳನ್ನು ಪ್ರಚಾರ ಮಾಡಿ ಸತ್ಯದ ರೀತಿಯಲ್ಲಿ ಬಿಂಬಿಸಿ ದೇಶದ ಯೋಧರ ಆತ್ಮಬಲವನ್ನು ಕುಗ್ಗಿಸುವ ಹೇಳಿಕೆ ನೀಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!