ಶ್ರೀಸತ್ಯಸಾಯಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಭಾರತದ ಯುವ ಸೈನಿಕ ಮುರಳಿ ನಾಯಕ್ (Murali Nayak) ಅವರು ಹುತಾತ್ಮರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ವೀರ ಮರಣ ಹೊಂದಿದ ಸೈನಿಕ ಮುರಳಿ ನಾಯಕ್ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮಂದಿ ಆಗಮಿಸಿದ್ದಾರೆ.
ಇದೇ ವೇಳೆ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pavan kalyan), ಸಚಿವ ನಾರಾ ಲೋಕೇಶ್ (Nara Lokesh) ಅವರು ಕೂಡ ಗೌರವ ಸಲ್ಲಿಸಿದ್ದಾರೆ.
ಈ ವೇಳೆ ಮಾತಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್, ಹುತಾತ್ಮ ಮುರಳಿ ನಾಯಕ್ ಕುಟುಂಬಕ್ಕೆ 50 ಲಕ್ಷ ರೂಪಾಯಿ 5 ಎಕರೆ ಜಮೀನು ನೀಡಲು ನಿರ್ಧರಿಸಿದೆ. ಆಂಧ್ರಪ್ರದೇಶದ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನನ್ನ ವೈಯಕ್ತಿಕವಾಗಿ 25 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದಿದ್ದಾರೆ.

ಪಾಕಿಸ್ತಾನ ಗಡಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಸತ್ಯಸಾಯಿ ಜಿಲ್ಲೆಯ ಸತ್ಯಸಾಯಿ ಜಿಲ್ಲೆಯ ಪೆನುಕೊಂಡದ ಕಲ್ಲಿಕೊಂಡ್ಲ ಗ್ರಾಮದ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಮುರಳಿ ನಾಯಕ್ ಹುತಾತ್ಮರಾದ ಯುವ ಯೋಧ.