Bagavan Buddha Jayanti Celebration

ಭಗವಾನ್ ಬುದ್ಧ ಜಯಂತಿ ಆಚರಣೆ

ಬೆಂ.ಗ್ರಾ.ಜಿಲ್ಲೆ: ಭಗವಾನ್ ಬುದ್ಧರ (Bagavan Buddha) ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು (AB Basavaraju) ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಪ್ರಥಮವಾಗಿ ಆಚರಿಸಲಾಗುತ್ತಿದೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.

ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನವಾಗಿದೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋದಿಸಿದ ಭಗವಾನ್ ಬುದ್ಧರ ತತ್ವ ಬೋಧನೆಗಳನ್ನು ಅರಿತರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯೂರಲಿದೆ ಎಂದರು.

ದಿವ್ಯ ಸಾನಿದ್ಯರಾಗಿದ್ದ ಬೌದ್ಧ ಬಿಕ್ಕುಣಿ ಮಾತಾ ಮೈತ್ರಿ ಅವರು ಮಾತನಾಡಿ ಬುದ್ಧನು ಹೇಳಿರುವ ಬೌದ್ಧ ಧರ್ಮದ 3 ಸಂದೇಶವನ್ನು ತಿಳಿಸಿದರು. ಬುದ್ಧರ ಉಪದೇಶಗಳು ಜ್ಞಾನ ಮಾರ್ಗವನ್ನು ಅರಿತರೇ ಅದು ಮನುಷ್ಯರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ವಕೀಲ ಮಹೇಶ್ ದಾಸ್ ಅವರು ಪ್ರಾಚೀನ ಗ್ರಂಥಗಳ ಪ್ರಕಾರ, ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಮತ್ತು ಭೌತಿಕ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು.

ಒಮ್ಮೆ, ಅವನು ಒಬ್ಬ ಮುದುಕ, ಅಸ್ವಸ್ಥ ಮತ್ತು ಶವವನ್ನು ನೋಡಿದನು. ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಚೋದನೆಯನ್ನು ಅವರು ಇದರಿಂದ ಪಡೆದುಕೊಂಡರು. ನಂತರ ಅವರು ಉತ್ತರಗಳನ್ನು ಪಡೆಯುವ ಹುಡುಕಾಟದಲ್ಲಿ 29 ನೇ ವಯಸ್ಸಿನಲ್ಲಿ ತನ್ನ ಮನೆಯನ್ನು ತೊರೆದು ಆಲದ ಮರದ ಕೆಳಗೆ ಕುಳಿತು ಜ್ಞಾನೋದಯವನ್ನು ಪಡೆಯಲು ಪ್ರಯತ್ನಿಸಿದರು.

ಆಳವಾದ ಧ್ಯಾನದ ನಂತರ ಅವರು ತಮ್ಮ 35ನೇ ವಯಸ್ಸಿನಲ್ಲಿ ಜ್ಞಾನೋದಯವನ್ನು ಪಡೆದುಕೊಂಡು ಮಹಾತ್ಮ ಬುದ್ಧ ಎಂದು ಕರೆಸಿಕೊಂಡರು. ಈ ಜ್ಞಾನದಿಂದ ಅವರು ಸಾಕಷ್ಟು ಬೋಧನೆಗಳನ್ನು ನೀಡಿದ್ದರು. ಅದನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖಂಡರಾದ ಶ್ರೀನಿವಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!