ಮಂಗಳೂರು: ಸಾರ್ವಜನಿಕವಾಗಿ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಗ್ರಾಮ ಪಂಚಾಯತಿ ಬೆಂಬಲಿತ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ, ಬಿಜೆಪಿಯಿಂದ (BJP) ಉಚ್ಚಾಟನೆ ಮಾಡಲಾಗಿದೆ.
ರಸ್ತೆ ವಿವಾದಕ್ಕೆ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ.
ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.