ಆಪರೇಷನ್ ಸಿಂಧೂರ: ಹೆಚ್.ಡಿ. ಕುಮಾರಸ್ವಾಮಿ ಪ್ರಶಂಸೆ

GST reform; Modi government's Diwali gift to the people of the country: H.D. Kumaraswamy happy

ಬೆಂಗಳೂರು: ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.

ದೆಹಲಿಗೆ ಹೊರಡುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದರು.

ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ದೇಶದ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಆ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿವೆ. ನೆರೆ ದೇಶದ ಸೇನೆಯು ಉಗ್ರ ಪೋಷಣೆ ಮಾಡುತ್ತಾ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ ಎಂದು ಸಚಿವರು ಹೇಳಿದರು.

ನರೇಂದ್ರ ಮೋದಿ ಅವರ ಧೃಢ ನಾಯಕತ್ವ ಹಾಗೂ ನಮ್ಮ ಹೆಮ್ಮೆಯ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ಭಾರತದ ಎಲ್ಲ ಕಡೆ ಮೇಲುಗೈ ಸಾಧಿಸಿದೆ. ಪಾಕಿಸ್ಥಾನಕ್ಕೆ ನಡುಕ ಉಂಟಾಗಿತ್ತು. ಉಗ್ರರ ಚಟುವಟಿಕೆಗಳಿಗೆ ಇತಿಶ್ರೀ ಹಾಡುವ ದೃಷ್ಟಿಯಿಂದ ದೇಶದ ಪ್ರಧಾನಿ ಅವರು ಅನೇಕ ಕ್ರಮಗಳನ್ನು ತೆಗೆದುಕೊಂಡದ್ದರು ಹಾಗೂ ಉಗ್ರರ ಶಿಬಿರಗಳ ಮೇಲೆ ನಮ್ಮ ಸೈನಿಕರು ದಾಳಿ ಮಾಡಿದ್ದರು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಅನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ ಎಂದ ಕೇಂದ್ರ ಸಚಿವರು, ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಒಪ್ಪಿಲ್ಲ. ಅದಕ್ಕೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಪ್ರಧಾನಿಗಳು ಕೂಡ ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರದ ಹಿತಾಸಕ್ತಿ ವಿಷಯದಲ್ಲಿ ಮೋದಿ ಅವರು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

ಉಗ್ರ ಪೋಷಕ ಪಾಕಿಸ್ತಾನವನ್ನು ಮಟ್ಟ ಹಾಕುವ ದೃಷ್ಟಿಯಿಂದ ಪೂರ್ಣ ಪ್ರಮಾಣದ ಯುದ್ದ ಆಗಲೇಬೇಕಿತ್ತು ಎಂಬ ನಿಲುವು ಒಂದು ಕಡೆ ಇದೆ. ಮತ್ತೊಂದು ಕಡೆ ರಷ್ಯಾ, ಉಕ್ರೇನ್ ಯುದ್ಧದಿಂದ ಇವತ್ತು ಯಾವ ಸ್ಥಿತಿ ಉಂಟಾಗಿದೆ ಎನ್ನುವ ವಾದವೂ ಇನ್ನೊಂದೆಡೆ. ಈ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ಆಲೋಚನೆ ಮಾಡುತ್ತಿದೆ. ಆದರೆ, ಈಗಲಾದರೂ ಪಾಕಿಸ್ತಾನ ಎಚ್ಚೆತ್ತುಕೊಳ್ಳದಿದ್ದರೆ ಅದು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮೋದಿ ನಿರ್ಧಾರಗಳನ್ನು ಬೆಂಬಲಿಸಬೇಕು

ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು. ಪಹಲ್ಗಾಮ್ ದಾಳಿ ನಡೆದಾಗಿನಿಂದ ಪ್ರಧಾನಿಗಳು ಯಾವ ರೀತಿ ಕೆಲಸ ಮಾಡಿದ್ದಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಪ್ರಧಾನಿಗಳು, ರಕ್ಷಣಾ ಸಚಿವರು ಅನೇಕ ಸಭೆಗಳನ್ನು ನಡೆಸಿದ್ದಾರೆ.

ದೇಶದ ಹಿತದೃಷ್ಟಿಯಿಂದ ಅನೇಕ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಗ್ರ ಚಟುವಟಿಕೆಗಳಿಗೆ ಅಂತಿಮ ಇತಿಶ್ರೀ ಹಾಡಬೇಕು ಎಂಬ ಹಿನ್ನೆಲೆಯಲ್ಲಿ ನೆರೆ ರಾಷ್ಟ್ರದ ವಿರುದ್ಧ ಮೋದಿ ಅವರು ಕೆಚ್ಚೆದೆಯ ತೀರ್ಮಾನಗಳನ್ನು ಮಾಡಿದ್ದಾರೆ. ನಮ್ಮ ದೇಶದ ಪ್ರತಿಷ್ಠೆಗೆ ಧಕ್ಕೆ ಬಾರದಂತೆ ಪ್ರಧಾನ ಮಂತ್ರಿಗಳು ಹಾಗೂ ಸೇನಾಪಡೆಗಳು ಕೈಗೊಂಡಿರುವ ನಿರ್ಧಾರಗಳನ್ನು ನಾವು ನೋಡಿದ್ದೇವೆ.

ಉಗ್ರರಿಗೆ ಶಿಕ್ಷೆ ಕೊಡಬೇಕು ಎಂಬ ದೃಷ್ಟಿಯಿಂದ ನಮ್ಮ ಸೈನಿಕರು ದೇಶಕ್ಕೆ ಗೌರವ ತರುವ ಕೆಲಸ ಮಾಡಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪಾಕಿಸ್ತಾನ ಶರಣಾಗುವಂತೆ ಸೇನಾಪಡೆಗಳು ತಮ್ಮ ಪರಾಕ್ರಮ ಮೆರೆದಿವೆ ಎಂದು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]