Nikhil Kumaraswamy to tour the state from June

ಜೂನ್‌ನಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

ಮಂಡ್ಯ: ಜೂನ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸದ ಬಗ್ಗೆ ಚರ್ಚಿಸಿದ್ದೇವೆ, ಹೆಚ್.ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ನಾಯತ್ವದಲ್ಲಿ ಪಕ್ಷ ಸಂಘಟನೆ ಮತ್ತು ಸ್ಥಳೀಯ ಚುನಾವಣೆಗಳ ತಯಾರಿಗಾಗಿ ಚರ್ಚಿಸಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy ) ಅವರು ತಿಳಿಸಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಣ್ಣ ಅವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯವಾಗಿದ್ದರೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚನ್ನಪಟ್ಟಣದಲ್ಲಿ ಕುಮಾರಣ್ಣ ಸೈಟ್ ಕೊಡೋದಾಗಿ ಜನರಿಂದ 5 ಸಾವಿರ ಕಟ್ಟಿಸಿಕೊಂಡಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆಸಿದ ಅವರು‌, ರಾಜ್ಯದ ಉಪ ಮುಖ್ಯಮಂತ್ರಿಗಳು ನಮ್ಮ ಬಗ್ಗೆ ದೂರುವ ಕೆಲಸ ಮಾಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ದೇವೇಗೌಡರ ಹಾಗೂ ಕುಮಾರಣ್ಣ ಅವರು ಅಭಿವೃದ್ಧಿಗೆ ಶ್ರಮಿಸಿದ ಬಗ್ಗೆ ಜಿಲ್ಲೆಯ ಜನರು ಗಮನಿಸಿದ್ದಾರೆ.

ರಾಜಕೀಯವಾಗಿ ಮಾತನಾಡಲಿ. ಐದು ಸಾವಿರ ಯಾವಾಗ ಕಟ್ಟಿಸಿಕೊಂಡಿದ್ರು? ಇದರ ಬಗ್ಗೆ ಗೊತ್ತಿಲ್ಲ ಎಂದರು.

ಪಾಕ್ ಗೆ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ

ಭಾರತ-ಪಾಕಿಸ್ತಾನ ಯುದ್ದ ಕದನ ವಿರಾಮ ವಿಚಾರಕ್ಕೆ ಮಾತನಾಡಿದ ಅವರು; ಯಾರು ಯಾರ ಮಾತನ್ನ ಕೇಳುವ ಪ್ರಶ್ನೆ ಇಲ್ಲ. ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ನೋಡಿದ್ದೇವೆ. ನಮ್ಮ ಹೆಣ್ಣುಮಕ್ಕಳ ಕುಂಕುಮ ಅಳಿಸುವ ಕೆಲಸ ಮಾಡಿದ್ದಾರೆ. ಅಪರೆಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕ್ ಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದರು.

ಮಕ್ಕಳ ಭವಿಷ್ಯ ರೂಪಿಸಲು ಬೇಸಿಗೆ ಶಿಬಿರ

ಇದಕ್ಕೂ ಮುನ್ನ ಮಂಡ್ಯದ ಸರ್. ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ಏರ್ಪಡಿಸಲಾಗಿದ್ದ “ಬೇಸಿಗೆ ಶಿಬಿರ” ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮೊದಲನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಸಭೆಯಲ್ಲಿ ಮಾತನಾಡಿದ ಅವರು,ಮಕ್ಕಳು ಬೇಸಿಗೆ ರಜಾ ದಿನಗಳನ್ನು ವ್ಯರ್ಥ ಮಾಡದೆ, ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳು ಬೇಸಿಗೆ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅವರು ಮನವಿ ಮಾಡಿದರು.

ಇದೆ ವೇಳೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿರುವ ಭಾರತದ ವೀರಯೋಧರಿಗೆ ನಮನಗಳು ಸಲ್ಲಿಸಲಾಯಿತು.ತಾಯ್ನಾಡಿನ ನೆಲದ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದ ವೀರಯೋಧರ ಶೌರ್ಯ, ತ್ಯಾಗ ಹಾಗೂ ಬಲಿದಾನ ಸದಾ ಸ್ಮರಣೀಯ ಎಂದು ಮಕ್ಕಳಿಗೆ ತಿಳಿಸಿದರು.

ನಂತರ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಎಸ್ ಪುಟ್ಟರಾಜು, ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ.ಕೆ ಅನ್ನದಾನಿ, ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್ ರಾಮಚಂದ್ರು, ಮಂಡ್ಯ ಜಿಲ್ಲಾಧ್ಯಕ್ಷ ಡಿ.ರಮೇಶ್ ಸೇರಿದಂತೆ ಅನೇಕ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!