ವಾಷಿಂಗ್ಟನ್ (Doland Trump): ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಇದೇ ಮೊದಲ ಬಾರಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ( PM Modi) ಅವರು 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿದರು.
ಆದರೆ ಅಚ್ಚರಿ ಎಂಬಂತೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Doland Trump), ಪ್ರಧಾನಿ ಮೋದಿಗೂ ಅವರಿಗೂ ಮುಂಚೆ ಸುಮಾರು 7.30ರ ವೇಳೆಗೆ ಸುದ್ದಿಗೋಷ್ಠಿ ನಡೆಸಿದ್ದು, ಭಾರತ-ಪಾಕ್ ಕದನ ವಿರಾಮಕ್ಕೆ ಕಾರಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಭಾರತ ಮತ್ತು ಪಾಕಿಸ್ತಾನಕ್ಕೆ ಸಾಕಷ್ಟು ಸಹಾಯ ಮಾಡಿದ್ದೇವೆ.
ಈ ಸಂಘರ್ಷಗಳು ನಿಲ್ಲದಿದ್ದರೆ ನಾವು ಎರಡೂ ದೇಶಗಳೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ನಾವು ಹೇಳಿದ್ದೇವೆ.. ಅವರು ಸಂಘರ್ಷಗಳನ್ನು ನಿಲ್ಲಿಸಿದರು.
ಭಾರತ ಮತ್ತು ಪಾಕಿಸ್ತಾನ ಎರಡು ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳು.. ಅವರು ಈ ಸಂಘರ್ಷದ ಗಂಭೀರತೆಯನ್ನು ಅರ್ಥಮಾಡಿಕೊಂಡರು ಮತ್ತು ಅದನ್ನು ನಿಲ್ಲಿಸಿದರು ಎಂದಿದ್ದಾರೆ.
ಈ ಮೂಲಕ ಅಮೇರಿಕಾ ಎರಡು ದೇಶಗಳನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಕದನ ವಿರಾಮಕ್ಕೆ ಕಾರಣವಾಯಿತೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ.