ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಾರತೀಯ ಸೇನೆಯ (Indian Army) ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೊಯ್ಬಾ (Lashkar-e-Taiba) ಭಯೋತ್ಪಾದಕನ ಹತ್ಯೆಯಾಗಿದೆ.
ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಒಬ್ಬ ಭಯೋತ್ಪಾದಕನ ಹತ್ಯೆ, ಇಬ್ಬರು ಭಯೋತ್ಪಾದಕರನ್ನು ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದಾರೆ ಎಂದು ವರದಿಯಾಗಿದೆ.
ಇದೀಗ ಬಂದ ಮಾಹಿತಿ ಅನ್ವಯ ಭಾರತ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೊಂದು ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಕಾಮ್‌ನಲ್ಲಿ ದಾಳಿ ನಡೆಸಿದ ಮೂವರು ಶಂಕಿತ ಉಗ್ರರ ಪತ್ತೆಗೆ ಅವರ ಫೋಟೊಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಮಾಹಿತಿ ಕೊಟ್ಟವರಿಗೆ ರೂ.20 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.