ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಇಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಜನ ಸೇನಾ (Jana Sena Party) ಪಕ್ಷದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಸುಬ್ರಹ್ಮಣ್ಯ ಸ್ವಾಮಿಯನ್ನು ಬೆಳ್ಳಿರಥದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಈ ವೇಳೆ ಶಾಸಕ ಬತುಲ ಬಲರಾಮಕೃಷ್ಣ, ಮತ್ತು ಜನಸೇನಾ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ದೇವಾಲಯ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಪ್ರಧಾನ ಅರ್ಚಕರು ಶ್ರೀನಿಧಿ ದೇವಾಲಯದ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.
