ಬೆಂಗಳೂರು; ಖಾಸಗಿ ಸಂಸ್ಥೆಗಳಿಂದ ತೀವ್ರ ನಿರ್ವಹಣೆ ಕೊರತೆ ಎಂಬ ಆರೋಪಕ್ಕೆ ಕಾರಣವಾಗಿದ್ದ 108 ಆಂಬುಲೆನ್ಸ್ (108 ambulance) ಸೇವೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಮುಂದಾಗಿರುವ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾಹಿತಿ ನೀಡಿದ್ದಾರೆ.
ಹೌದು ಇನ್ಮುಂದೆ ಯಾವುದೇ ಏಜೆನ್ಸಿ ಮೂಲಕ 108 ಆಂಬುಲೆನ್ಸ್ ಕಾರ್ಯ ನಡೆಸದೆ 108 ಆಂಬುಲೆನ್ಸ್ ಸೇವೆಯನ್ನು ಸರ್ಕಾರವೇ ನೀಡುತ್ತದೆ.
ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಈಗಾಗಲೇ ಚಾಮರಾಜನಗರದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ 108 ಆಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಮಾತ್ರ ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.