ದಾವಣಗೆರೆ: ವಾಹನ ತಪಾಸಣೆಯ ವೇಳೆ ಲಾರಿ ಡಿಕ್ಕಿ ಹೊಡೆದು (Accident) ಡಿಎಆರ್ ಕಾನ್‌ಸ್ಟೇಬಲ್ ರಾಮಪ್ಪ ಪೂಜಾರಿ (33 ವರ್ಷ) ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಾಳ ಸಮೀಪದ ರಾಷ್ಟ್ರೀಯಹೆದ್ದಾರಿ 48ರ ಟೋಲ್ ಬಳಿ ಸಂಭವಿಸಿದೆ.
ದಾವಣಗೆರೆ ಕಡೆಯಿಂದ ಚಿತ್ರದುರ್ಗ ದತ್ತ ಸಾಗುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಲಾರಿಯೊಂದು ಪೊಲೀಸರಿಂದ ತಪ್ಪಿಸಿ ಕೊಳ್ಳುವ ಸಲುವಾಗಿ ವೇಗವಾಗಿ ಬಂದು ಪೇದೆ ಮೇಲೆ ಹರಿದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಪೂಜಾರಿ ಅವರನ್ನು ತಕ್ಷಣ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾನ್ ಸ್ಟೇಬಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ ರಾಮಪ್ಪ ಪೂಜಾರಿ, 2016ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಇತ್ತೀಚೆಗೆ ಇವರನ್ನು ಹೆದ್ದಾರಿ ಪಥ ಶಿಸ್ತು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.