ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ರಾರಂಭಿಸಲು ಸರ್ಕಾರದಿಂದ ಆದೇಶ ಹೊರಡಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಜ್ಯಾದ್ಯಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು
https://sevasindhu.karnataka.gov.in/Sevasindhu/DepartmentServices
ಅಥವಾ
https://dom.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನಾಂಕವಾಗಿರುತ್ತದೆ.
90 ದಿನದ ವಸತಿಯುತ ತರಬೇತಿಯಾಗಿದ್ದು, ತರಬೇತಿಯು ಮೈಸೂರು ಮತ್ತು ಬೆಳಗಾವಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಅಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆ
1.ಅಭ್ಯರ್ಥಿಯು ಕರ್ನಾಟಕದ ಕಾಯಂ ನಿವಾಸಿಯಾಗಿದ್ದು ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ ಕ್ರಿಶ್ಚಿಯನ್ ಸಿಖ್ ಜೈನ್ ಬೌದ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
- ಅಭ್ಯರ್ಥಿಯ ವಯಸ್ಸು 21 ರಿಂದ 30 ರ ವಳಗಿರಬೇಕು.
- ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು.
- ಸದರಿ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ಎತ್ತರ: ಪುರುಷರಿಗೆ ಕನಿಷ್ಠ 168 ಸೆಂ.ಮೀ ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ
6.ತೂಕ: ಪುರುಷರಿಗೆ ಕನಿಷ್ಠ 50 ಕೆಜಿ ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆಜಿ.
- ಎದೆ ಸುತ್ತಳತೆ (ಪುರುಷರಿಗೆ): ಕನಿಷ್ಠ 76 ಸೆಂ.ಮೀ
ಗಮನದಲ್ಲಿ ಇರಬೇಕಾದ ಅಂಶಗಳು
- ಇಲಾಖಾ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿರುತ್ತದೆ.
- ಇಲಾಖಾ ವತಿಯಿಂದ ಯಾವುದೇ ಪ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ, ಇಲಾಖೆ ವೆಬ್ಸೈಟ್ ಅನ್ನು ವೀಕ್ಷಿಸತಕ್ಕದ್ದು.
- ತಪ್ಪು ಮಾಹಿತಿ ಕಾರಣದಿಂದ ಉಂಟಾಗಬಹುದಾದ ಲೋಕಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಕಾರಣ.
- ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 827779990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.