ದೊಡ್ಡಬಳ್ಳಾಪುರ (JDS): ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕ ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಿಗದಿಯಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಅವರ ಅಧ್ಯಕ್ಷತೆಯಲ್ಲಿ, ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ ಅವರ ಸಮ್ಮುಖದಲ್ಲಿ ನಾಳೆ (ಮೇ.15) ಮಹತ್ವದ ಸಭೆ ಕರೆಯಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್, ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಕುರಿತಂತೆ ಚರ್ಚಿಸಲು ಮೇ.15 ರಂದು ಬೆಳಗ್ಗೆ 11 ಗಂಟೆಗೆ ನಗರದ ಒಕ್ಕಲಿಗರ ಸಮುದಾಯ ಭವನದ ಸಮೀಪವಿರುವ ಜೆಡಿಎಸ್ ಕಚೇರಿಯಲ್ಲಿ ಸಭೆ ನಿಗದಿಯಾಗಿದೆ.
ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಎಂಪಿಸಿಎಸ್ ಅಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಮುಖಂಡರು ಭಾಗವಹಿಸುತ್ತಿದ್ದು, ಜೆಡಿಎಸ್ ಪಕ್ಷದಿಂದ ಬಮೂಲ್ ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸುವ ಆಕಾಂಕ್ಷಿಗಳು ಹೆಸರನ್ನು ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.