BJP to hold Tiranga Yatra tomorrow: R. Ashoka

ನಾಳೆ ಬಿಜೆಪಿಯಿಂದ ತಿರಂಗಾ ಯಾತ್ರೆ.. ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ: ಆರ್‌.ಅಶೋಕ

ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ.

ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಾಪಸ್‌ ಪಡೆಯುವ ಬಗ್ಗೆ, ಸಿಂದೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ.

ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಟ್ವೀಟ್‌ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಭೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ.

ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ ಎಂದರು.

ತಿರಂಗಾ ಯಾತ್ರೆ

ಯುದ್ಧ ಆರಂಭವಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಯೋಧರ ಜೊತೆ ನಾವೆಲ್ಲರೂ ಇದ್ದೇವೆ ಎಂದು ಹೇಳುವುದು ಪ್ರತಿ ಭಾರತೀಯರ ಕರ್ತವ್ಯ. ಅದಕ್ಕಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಯಲಿದೆ.

ಮೇ 15 ರಂದು ರಾಜಧಾನಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರದ ಸಂಪಿಗೆಯ ರಸ್ತೆಯಲ್ಲಿ ಶಿರೂರು ಪಾರ್ಕ್‌ನಿಂದ 18 ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ. ಇದರಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ರಾಷ್ಟ್ರಧ್ವಜ ಇರಲಿದೆ ಎಂದು ತಿಳಿಸಿದರು.

ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ, ಮೇ 18 ರಿಂದ 23 ರವರೆಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ಮಾಡಲಾಗುವುದು. ಇದರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಭಾರತೀಯ ಮಹಿಳೆಯರ ಸಿಂದೂರ ಮುಟ್ಟಿದರೆ ಏನಾಗುತ್ತದೆ ಎಂಬುದನ್ನು ಭಾರತೀಯ ಸೇನೆ ತೋರಿಸಿದೆ. 100 ಕ್ಕೂ ಅಧಿಕ ಉಗ್ರರು ಸತ್ತಿದ್ದಾರೆ. ತರಬೇತಿ ಕೇಂದ್ರಗಳು ನಾಶವಾಗಿದೆ. ಯುದ್ಧ ಕೈ ಬಿಡಿ ಎಂದು ಅಂಗಲಾಚುವ ಮಟ್ಟಕ್ಕೆ ಪಾಕಿಸ್ತಾನ ಬಂದಿದೆ ಎಂದರು.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!