ಆಗುಂಬೆ; ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಕರೆಂಟ್ ಶಾಕ್ (Electric shock) ಹೊಡೆದು ಯುವ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ಆಗುಂಬೆ ಸಮೀಪ ಸಂಭವಿಸಿದೆ.
ಮೃತ ಕಲಾವಿದನನ್ನು 22 ವರ್ಷದ ರಂಜಿತ್ ಬನ್ನಾಡಿ ಎಂದು ಗುರುತಿಸಲಾಗಿದೆ.
ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಮಳೆಯಿಂದ ರದ್ದಾದ ಕಾರಣ ರಂಜಿತ್ ಬನ್ನಾಡಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಸಾಗುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ. ಈ ವೇಳೆ ಬೈಕ್ ಚಲಾಯಿಸುತ್ತಿದ್ದ ರಂಜಿತ್ ಗಂಭೀರ ವಿದ್ಯುತ್ ಶಾಕ್‌ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯರ ಸಹಕಾರದಿಂದ ಹಿಂಬದಿ ಸವಾರ ವಿನೋದ್ ರಾಜ್ ಪಾರಾಗಿದ್ದಾರೆ.
ವಿನೋದ್ ರಾಜ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.