Mango purchasing center established in Bengaluru district.. Price fixing

ಮಾವು ಮಾರಾಟ ಮತ್ತು ಪ್ರದರ್ಶನ: ಐದು ದಿನಗಳ ಕಾಲ ಹಣ್ಣಿನ ರಾಜನ ಹಬ್ಬ

ಧಾರವಾಡ: ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ ಐದು ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು (Mango Exhibition and Sales Fair) ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಾವು ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.

ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮಾವು ಮಾರಾಟ ಮೇಳದಲ್ಲಿ ಸುಮಾರು 30 ಜನ ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದು ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ.

ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಅವರು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ, ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ (11844 ಹೆ) ನಲ್ಲಿ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1 ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29,000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯು ಸಾಂಪ್ರದಾಯಕವಾಗಿ ಮಾವು ಬೆಳೆಯುವ ರಾಜ್ಯದ ಮುಖ್ಯ ಭಾಗವಾಗಿದ್ದು, ಪ್ರಮಖವಾಗಿ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಮಾವು ಬೆಳೆಯನ್ನು ಬೆಳೆಯಲು ಸೂಕ್ತವಾದ ವಾತಾವರಣವಿರುವುದರಿಂದ ಉತ್ತಮ ಮಾವು ಬೆಳೆಯನ್ನು ಬೆಳೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ರೈತರಿಗೆ ಒಳ್ಳೆಯ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ ಮೇಳವನ್ನು ಆಯೋಜನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಗೆ ಸರಕಾರದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದೇಶ ನೀಡಿ, ಈಗಾಗಲೇ ಸುಮಾರು 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಉದ್ದೇಶಿತ ಮಾವು ಅಭಿವೃದ್ಧಿ ಕೇಂದ್ರವನ್ನು ಧಾರವಾಡ ತಾಲೂಕಿನ ಕುಂಭಾಪುರ ಫಾರ್ಮದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು. ಮಾವು ಅಭಿವೃದ್ಧಿ ಕೇಂದ್ರವು ಜಿಲ್ಲೆಯ ರೈತರಿಗೆ ಮಾತ್ರವಲ್ಲದೇ, ಸುತ್ತಲಿನ ಜಿಲ್ಲೆಗಳಲ್ಲಿ ಮಾವು ಬೆಳೆಯುವ ರೈತರಿಗೂ ಪ್ರಯೋಜನವಾಗಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಮಾವು ಅಭಿವೃದ್ಧಿ ಕೇಂದ್ರದಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ, ಹಣ್ಣು ಮಾಡುವುದು, ರೈತರಿಗೆ ಗ್ರೇಡಿಂಗ್ ವ್ಯವಸ್ಥೆ, ಮಾವು ಬೆಳೆಗಳ ತರಬೇತಿ, ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ನೀಡುವ ಸಮಗ್ರ ಮಾಹಿತಿ ಕೇಂದ್ರವಾಗಿ ನಿರ್ವಹಿಸುತ್ತದೆ.

ಧಾರವಾಡ ಜಿಲ್ಲೆಯಲ್ಲಿ ಮಾವು ಬೆಳೆಯನ್ನು ಪ್ಯಾಶನ್ ಆಗಿ ತೆಗೆದುಕೊಂಡು ಬೆಳೆಯುವ ಗಾಂವಕರ ಅವರು 100 ವಿಧವಾದ ಮಾವು ಬೆಳೆದಿದ್ದಾರೆ. ಅದರಲ್ಲಿ ಸ್ವರ್ಣರೇಖಾ, ಮಿಯಾಜಾಕಿ ಅದರಲ್ಲಿ ಹೈ ಕ್ವಾಲಿಟಿ, ಅತಿ ಹೆಚ್ಚು ಬೆಲೆ ಇರುವ ಮಾವುಗಳನ್ನು ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಅವುಗಳಿಗೆ ಭಾರಿ ಬೇಡಿಕೆ ಇದೆ.

ಮಾವು ಬೆಳೆಗಾರರಿಗೆ ಇದರ ಬಗ್ಗೆ ಮಾಹಿತಿ ನೀಡುವ ಅಗತ್ಯವಿದ್ದು, ತೋಟಗಾರಿಕೆ ಇಲಾಖೆಯಿಂದ ಪ್ರಗತಿಪರ ಮಾವು ಬೆಳೆಗಾರ ರೈತರಿಂದ ಪ್ರಮೋದ ಗಾಂವಕರ ಅವರ ಮಾವಿನ ತೋಟಕ್ಕೆ ಭೇಟಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹಾಪ್ ಕಾಮ್ಸ್ ಅಧ್ಯಕ್ಷ ಸಿದ್ದಣ್ಣ ಪ್ಯಾಟಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಕೃಷಿ ಇಲಾಖೆ ಉಪ ನಿರ್ದೇಶಕ ಕೆ.ಸಿ.ಭದ್ರಣ್ಣವರ, ಹಿರಿಯ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪುರಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ತಮ್ಮಣ್ಣ ಗುಂಡಗೋವಿ ಸೇರಿದಂತೆ ಇತರರು ಇದ್ದರು.

ಬಗೆಬಗೆಯ ಮಾವು

ಹಣ್ಣುಗಳ ರಾಜ ಮಾವಿನ ಹಣ್ಣುಗಳ ವಿವಿಧ ಬಗೆಬಗೆಗಳಾದ ಸುಂದರ ಶಾ, ಪೈರಿ, ಜಿರಗಿಮಾವು, ಉಪ್ಪಿನಕಾಯಿ ತಳಿ, ಅರ್ಕಾ ನೀಲಕಿರಣ, ಸುವರ್ಣರೇಖಾ, ಧಾರವಾಡ ರಸಪೂರಿ, ಖಾದರ, ಫರ್ನಾಡಿನ್, ಕಿಶನ ಭಾಗ್, ಫಜಲಿ, ದಿಲಪಸಂದ, ರತ್ನಾ, ಗೂಂಗ, ಹಿಮಸಾಗರ, ಆಮ್ರಪಾಲ, ಲಕನೌ ಸಫೇದ, ನಿರಂಜನ, ಸಿಂಧು, ಕಲಪಡಿ, ನೀಲಗೋವಾ, ಮಲ್ಲಿಕಾ, ಅರ್ಕಾ ಪುನೀತ, ಲಾಂಗ್ರಾ, ನಾಜೂಕ ಪಸಂದ, ಚರಕು ರಸಂ ಮುಂಯಾದ ಹಲವಾರು ತಳಿಗಳ ಮಾವಿನ ಹಣ್ಣುಗಳು ಮಾವು ಮೇಳದಲ್ಲಿ ಸಾರ್ವಜನಿಕರಿಗೆ ಮಾರಟಕ್ಕಾಗಿ ಲಭ್ಯ ಇವೆ.

ಹೆಚ್ಚಾಗಿ ವಿದೇಶಗಳಿಗೆ ಮಾವಿನ ತಳಿಗಳಾದ ಆಪೂಸ್, ನೀಲಮ್ ಕೇಸರ ಹಾಗೂ ಸ್ಥಳಿಯ ತಳಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಜಿಲ್ಲೆಯ ಕೆಲವು ಮಾವು ಬೆಳೆಗಾರರಾದ ಪ್ರಮೋದ, ಗಾಂವಕರ, ಶಿವನಗೌಡ ಪಾಟೀಲ, ರಾಜೇಂದ್ರ ಪೆÇೀದ್ದಾರ, ಗಿರೀಶ ಕೆರೂರ ಹಾಗೂ ದೇಶಪಾಂಡೆ ಅವರು ಸುಮಾರು 4 ಟನ್ ಮಾವಿನ ಹೆಣ್ಣುಗಳನ್ನು ರೂ. 150 ಕೆಜಿ ಯಂತೆ ಸಿಂಗಾಪುರ, ಅಮೇರಿಕಾ ರಾಷ್ಟ್ರಗಳಿಗೆ ರಫ್ತು ಮಾಡಿದ್ದಾರೆ.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!