ಬೆಂಗಳೂರು: ‘ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು ರೂ. 32 ಸಾವಿರ ಕೋಟಿ ಬಿಡುಗಡೆಗೆ ಬಾಕಿಯಿದೆ. 2-3 ತಿಂಗಳಲ್ಲಿ ಈ ಹಣವನ್ನು ಬಿಡುಗಡೆ ಮಾಡುವುದಾಗಿ’ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘದ ನಿಯೋಗಕ್ಕೆ ಮಂಗಳವಾರ ಈ ಕುರಿತು ಭರವಸೆ ನೀಡಿದ್ದಾರೆ.
ಈ ವೇಳೆ ಗುತ್ತಿಗೆದಾರರ ಸಂಘದ ಮುಖಂಡರು, ನಾಲ್ಕು ನಿಗಮಗಳಲ್ಲಿ ಅನುಭವಿಸುತ್ತಿರುವ ಗುತ್ತಿಗೆದಾರರ ಸಮಸ್ಯೆಗಳ ವಿವರಿಸಿದರು.
ಸಭೆಯಲ್ಲಿ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಹಾಗೂ ಕರ್ನಾಟಕ ಸರ್ಕಾರದ ಎಲ್ಲಾ ಪೆಂಡಿಂಗ್ ಬಿಲ್ಲುಗಳನ್ನು ಒಂದೇ ಸಾರಿ ಕ್ಲಿಯರ್ ಮಾಡ್ಲಿಕ್ಕೆ ಪ್ರಯತ್ನ ಮಾಡುತ್ತಿರುವುದಾಗಿ ಡಿಸಿಎಂ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ, ಉಪಾಧ್ಯಕ್ಷ ಹನುಮಂತಯ್ಯ, ಜಂಟಿ ಕಾರ್ಯದರ್ಶಿ ಎಂ.ರಮೇಶ್, ಹಿರಿಯ ಸದಸ್ಯರು ಜಿ.ಲಕ್ಷ್ಮೀಪತಿ, ನಂದಕುಮಾರ್ ಇದ್ದರು.