State MPs and Rajya Sabha members should bring central grants: CM Siddaramaiah

ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50 , 60:40 , 70:30 ರಷ್ಟಿರುತ್ತದೆ.

ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ 22758ಕೋಟಿ ರೂಪಾಯಿಗಳಿದ್ದು ಕೇಂದ್ರದಿಂದ 18561ಕೋಟಿ ಮಾತ್ರ ಬಿಡುಗಡೆ ಆಗಿದೆ 4195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ ಎಂದರು.

ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ.

ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ ಎಂದರು.

ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಪತ್ರ

ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಅನುದಾನ ನೀಡದೇ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]