Good Morning News: Patent for Tubagere jackfruit varieties..!

ಗುಡ್ಮಾರ್ನಿಂಗ್ ನ್ಯೂಸ್: ತೂಬಗೆರೆ ಹಲಸು ತಳಿಗಳಿಗೆ ಪೇಟೆಂಟ್..!

ದೊಡ್ಡಬಳ್ಳಾಪುರ: ರುಚಿಗೆ ಪ್ರಸಿದ್ಧಿ ಪಡೆದಿರುವ ತಾಲೂಕಿನ ತೂಬಗೆರೆ ಹಲಸು (Jackfruit) ತಳಿಗಳಿಗೆ ಈಗ ಪೇಟೆಂಟ್ ಪಡೆದಿವೆ

ಹೌದು ದೊಡ್ಡಬಳ್ಳಾಪುರ ತಾಲೂಕಿ‌ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಬೆಳೆಯಲಾಗುವ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೆಂಟೆಂಟ್ ದೊರಕಿದೆ.

ಈ ಹಿನ್ನೆಲೆಯಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮ ಜರುಗಿತು.

ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿಎಫ್‌ಆರ್‌ಎ) ದಿಂದ  ತೂಬಗೆರೆ ಸುತ್ತಮುತ್ತಲಿನ ಎಂಟು ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್)  ಪ್ರಮಾಣ ಪತ್ರವನ್ನು ವಿಶ್ರಾಂತ ಕುಲಪತಿ ನಾರಾಯಣ ಗೌಡ ವಿತರಿಸಿ ಮಾತನಾಡಿದರು.

ಹಲಸಿನ ಹಣ್ಣಿನ ಬಗ್ಗೆ ಕೆಲವು ವರ್ಷಗಳಿಂದ ಸಂಶೋಧನೆಗಳು ನಡೆಯುತ್ತಿವೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಹಲಸಿನ ಹಣ್ಣುಗಳಲ್ಲಿರುವ ಔಷಧೀಯ ಗುಣ, ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳನ್ನು ತಯಾರಿಸುವ ಸಂಬಂಧ ಸಂಶೋಧನೆ ಮಾಡುತ್ತಿದೆ.

ಸ್ಥಳೀಯವಾಗಿ ಹಲಸಿನ ಹಣ್ಣು  ಮೌಲ್ಯವರ್ಧನೆ, ಉತ್ಪನ್ನಗಳ ಕುರಿತ ಅರಿವಿಗೆ ಮೂಡಿಸುತ್ತಿದೆ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ. ಆದ್ದರಿಂದ ಈಗ ಪೇಟೆಂಟ್ ಪಡೆದ ರೈತರು ತಮ್ಮ ತಳಿಗಳನ್ನು ಜವಾಬ್ದಾರಿಯಿಂದ ಸಂರಕ್ಷಿಸಬೇಕು ಇಂದುರು.

ರೈತರಿಗಾಗಿ ‘ಹಲಸಿನ ಸಾಗುವಳಿ ಮತ್ತು ಮಾರುಕಟ್ಟೆ’ ಹಲಸಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಹಲಸು ಹಚ್ಚುವ ಯಂತ್ರದ ಕುರಿತು ಜಿಕೆವಿಕೆ ವಿಜ್ಞಾನಿ ಡಾ ಶಾಮಲ ಮಾಹಿತಿ ನೀಡಿದರು.

ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ತೂಬಗೆರೆ ಸೇರಿದಂತೆ ತಾಲೂಕಿನಲ್ಲಿ 1 ಸಾವಿರ ಟನ್‌ ಹಲಸು ವಹಿವಾಟು ಆಗಿದೆ. ಯಾವುದೇ ರಸ್ತೆ ಪಕ್ಕ ನೋಡಿದರೂ ಹಲಸು ಕಾಣುತ್ತದೆ. ಬೆಂಗಳೂರು ಅಥವಾ ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪ ಎಲ್ಲಾಸೌಲಭ್ಯ ಒಳಗೊಂಡಂತೆ ಹಲಸು ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂದರು.

ಪಿಪಿಎಫ್‌ಆರ್‌ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ ಮಾತನಾಡಿ, ನಮ್ಮ ಹೊಲದ ಹಲಸಿನ ಹಣ್ಣಿಗೆ ರಾಷ್ಟ್ರ ಮಟ್ಟದ ಮಾನ್ಯತೆ ನೀಡಿರುವುದು ಸಂತಸ ತಂದಿದೆ. ಮುಂದಿನ 20 ವರ್ಷ ಈ ಹಣ್ಣಿನ ತಳಿಯನ್ನು ಬೇರೆ ಯಾರೂ ಬೆಳೆಸಲು ಅವಕಾಶ ಸಿಗುವುದಿಲ್ಲ. ಹಣ್ಣಿನ ಮಾಲೀಕರು ಅನುಮತಿ ನೀಡಿದವರು ಮಾತ್ರ ಸಸಿಗಳನ್ನು ಬೆಳೆಸಿ, ಮಾರಾಟ ಮಾಡಲು ಅವಕಾಶವಿದೆ ಎಂದರು.

ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಚಿಪ್ಸ್, ನಂತಹ ಉತ್ಪನ್ನಗಳ ಪ್ರದರ್ಶನ ಸಹ‌ ನೆಡೆಯಿತು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!