ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಘೋಷಣೆಯಂತೆ ಅತಿಥಿ ಶಿಕ್ಷಕ, ಉಪನ್ಯಾಸಕರ (guest teachers and lecturers) ಗೌರವ ಸಂಭಾವನೆ ಹೆಚ್ಚಿಸಲಾಗಿದೆ.
ಈ ಕುರಿತಂತೆ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ, ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಾಶ ಎಸ್ ಆದೇಶಿಸಿದ್ದಾರೆ.
ಆದೇಶ ಪತ್ರದನ್ವಯ, ಸರ್ಕಾರದ ಆದೇಶದಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು.
ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/-ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿ ಆದೇಶಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ / ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪರಿಷ್ಕರಿಸಿ ಆದೇಶಿಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ರೂ.10 ಸಾವಿರದಿಂದ ರೂ.12 ಸಾವಿರ.
ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ.10.500 ರಿಂದ ರೂ.12.500.
ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ 12 ಸಾವಿರದಿಂದ ರೂ.14 ಸಾವಿರಕ್ಕೆ ಪರಿಷ್ಕರಿಸಲಾಗಿದೆ.