Justice from the government for the family of the abandoned girl: DCM DK Shivakumar

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ರಾಮನಗರ: “ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ರೂ.4,12,500 ಹಾಗೂ ಪಂಚಾಯ್ತಿ ವತಿಯಿಂದ ರೂ.50,000 ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ” ಎಂದರು.

“ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ” ಎಂದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ” ಎಂದರು.

“ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ” ಎಂದರು.

ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು” ಎಂದರು.

ಆರೋಪಿಗಳ ಬಂಧನವಾಗಿದೆಯೇ ಎಂದಾಗ, “ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡುತ್ತಾರೆ. ನಾನು ಅದನ್ನು ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!