NREGA: Let's Work Campaign

ನರೇಗಾ: ದುಡಿಯೋಣ ಬಾ ಅಭಿಯಾನ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಎಲ್ಲಾ 101 ಗ್ರಾಮ ಪಂಚಾಯಿತಿಗಳಲ್ಲಿ ಮೇ 1 ರಿಂದ ಒಂದು ತಿಂಗಳ ಕಾಲ ಕೂಲಿಕಾರರಿಗೆ 100 ದಿನಗಳ ಕೆಲಸವನ್ನು ಒದಗಿಸಲು “ದುಡಿಯೋಣ ಬಾ” ಅಭಿಯಾನ (Let’s work campaign) ಕೈಗೊಳ್ಳಲಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಥಳೀಯ ಗ್ರಾಮೀಣ ಜನರಿಗೆ ನಿರಂತರ ಕೆಲಸವನ್ನು ಒದಗಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಉದ್ಯೋಗ ಚೀಟಿಯನ್ನು ಹೊಂದಿರುವ ಸಣ್ಣ ರೈತರು, ಅತಿ ಸಣ್ಣ ರೈತರು ಮತ್ತು ಕೂಲಿಕಾರರು ನರೇಗಾ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು ನಿರಂತರವಾಗಿ ಅಕುಶಲ ಕೆಲಸವನ್ನು ಒದಗಿಸುತ್ತಿರುವ ಬಗ್ಗೆ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ದುಡಿಯೋಣ ಬಾ ಅಭಿಯಾನದಡಿ ವ್ಯಾಪಕ ಜನಜಾಗೃತಿ ಮೂಡಿಸಲು ಕರಪತ್ರಗಳ ವಿತರಣೆ ಗ್ರಾಮಮಟ್ಟದಲ್ಲಿ ಮನೆಮನೆ ಭೇಟಿ ಮಹಿಳಾ ಸಂಘದ ಸದಸ್ಯರ ಸಭೆಗಳಲ್ಲಿ ಮಾಹಿತಿ ವಿತರಣೆ, ಆಟೋ, ಸ್ವಚ್ಚತಾ ವಾಹಿನಿ ಮುಖಾಂತರ ಪ್ರಚಾರವನ್ನು ಮಾಡಲಾಗುತ್ತಿದೆ.

ನರೇಗಾ ಯೋಜನೆಯಡಿ ನೋಂದಾಯಿತ ಕುಟುಂಬಗಳಿಂದ ಮತ್ತು ಅಕುಶಲ ಕೆಲಸಕ್ಕಾಗಿ ಬೇಡಿಕೆಯನ್ನು ಸ್ವೀಕರಿಸಲು ತಾಲ್ಲೂಕು ಐಇಸಿ ಸಂಯೋಜಕರು, ಗ್ರಾಮ ಕಾಯಕ ಮಿತ್ರ, ಹಾಗೂ ಬಿಎಫ್ ಟಿ ಕಾಯಕ ಬಂಧು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು (ಎಮ್ ಬಿ ಕೆ ) ರಚಿಸಿ ಮನೆಮನೆ ಭೇಟಿ ಹಾಗೂ ರಾಜ್ಯ ದಿವಸ್ ಆಚರಿಸುವ ಮೂಲಕ ಬೇಡಿಕೆಯನ್ನು ಸಂಗ್ರಹಿಸಿ ಕಾರ್ಯದೇಶವನ್ನು ನೀಡಲಾಗಿದೆ.

ಹೊಸದಾಗಿ ಉದ್ಯೋಗ ಚೀಟಿಯನ್ನು ಪಡೆಯುವವರ ಹತ್ತಿರ ಅರ್ಜಿಯನ್ನು ಸ್ವೀಕರಿಸಿ ಉದ್ಯೋಗ ಚೀಟಿಯನ್ನು ನೀಡಲಾಗುತ್ತಿದೆ. ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ನಿರಂತರವಾಗಿ ಕೆಲಸವನ್ನು ಒದಗಿಸಲಾಗುತ್ತಿದೆ. ಬೇಡಿಕೆ ಸಲ್ಲಿಸಿದ ವಿಶೇಷವಾಗಿ ಮಹಿಳೆಯರಿಗೆ ಮತ್ತು ವಿಶೇಷ ಚೇತನರಿಗೆ ಕೆಲಸ ಒದಗಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೂಲಿ ಕಾರ್ಮಿಕರಿಗೆ ನಿರಂತರ ಅಕುಶಲ ಕೆಲಸವನ್ನು ಒದಗಿಸುತ್ತಿರುವ ಬಗ್ಗೆ ಪ್ರತಿ ದಿನ ತಾಲೂಕು ಮಟ್ಟದಿಂದ ಮೇಲ್ವಿಚಾರಣೆ ಮಾಡುವುದು ಜೊತೆಗೆ ಜಿಲ್ಲಾ ಮಟ್ಟದಿಂದ ವಾರಕ್ಕೆ ಒಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಿಇಒ ತಿಳಿಸಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]