ಎಚ್ಚರ: ಬೇಕಾಬಿಟ್ಟಿ ಡ್ರೋನ್ ಚಟುವಟಿಕೆ ನಿಷೇಧ.. ಬೆಂ.ಗ್ರಾ.ಜಿಲ್ಲೆಯವರು ಗಮನಿಸಿ

Warning: Drone activity from rooftops is prohibited.. Bengaluru district residents take note

ಬೆಂ.ಗ್ರಾ.ಜಿಲ್ಲೆ: ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ (Drone) ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ.

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್.

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL.

ನೆಲಮಂಗಲ: ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್.

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ.

ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]