PM E-Drive scheme; Karnataka places demand for more electric buses

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E – ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ( ರಾಮಲಿಂಗಾ ರೆಡ್ಡಿ) ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ( H.D. Kumaraswamy) ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನವದೆಹಲಿಯ ಸಚಿವಲಾಯದಲ್ಲಿ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಅಲ್ಲದೆ, ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಸಚಿವ ಕುಮಾರಸ್ವಾಮಿ ಅವರು; ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

“ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ರಾಮಲಿಂಗಾರೆಡ್ಡಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ ಕುಮಾರಸ್ವಾಮಿ ಅವರು; “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ PM E-ಡ್ರೈವ್ ಯೋಜನೆ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ.

ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕವೂ ಸೇರಿ ಭಾರತದಾದ್ಯಂತ ವಿದ್ಯುತ್‌ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ” ಎಂದು ತಿಳಿಸಿದರು.

PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ.

ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಾಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

“ನಾವು ವಿದ್ಯುತ್‌ ಚಾಲಿತ ಬಸ್ಸುಗಳನ್ನು ವಿತರಿಸುತ್ತಿದ್ದೇವೆ ಎನ್ನುವುದಕ್ಕಿಂತ, ನಾವು ಭಾರತದ ಜನತೆಗೆ ಸ್ವಚ್ಛ, ಚುರುಕಾದ ಮತ್ತು ಹೆಚ್ಚು ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದೇವೆ” ಎಂದು ತಿಳಿಸಿದ ಕೇಂದ್ರ ಸಚಿವರು; ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾದ PM E-ಡ್ರೈವ್ ಉಪಕ್ರಮವು 14,028 ವಿದ್ಯುತ್‌ ಚಾಲಿತ ಬಸ್ಸುಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಗೆ ಕೇಂದ್ರ ಸರಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ₹10,900 ಕೋಟಿ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಸರಕಾರಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ ಈ ಪರಿವರ್ತನಾಶೀಲ ಗುರಿಯನ್ನು ಪೂರೈಸಲು ಬೃಹತ್‌ ಕೈಗಾರಿಕಾ ಸಚಿವಾಲಯವು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]