ಬೆಂಗಳೂರು: ಭಾರತ – ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB ) ತಂಡದ ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.
ಅದರಲ್ಲೂ ತಂಡದ ಸೆನ್ಸೆಷನಲ್ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಲೀಗ್‌ನ ಮುಂದಿನ ಹಂತದಲ್ಲಿ ಭಾಗವಹಿಸಲು ಭಾರತಕ್ಕೆ ಮರಳಿರುವುದು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.
ಈಗಾಗಲೇ ಬಹುತೇಕ RCB ಆಟಗಾರರು ತಮ್ಮ ತಮ್ಮ ತಂಡವನ್ನು ಸೇರಿಕೊಂಡಿದ್ದಾರೆ. ಮೇ.17 ರಂದು ನಡೆಯಲಿರುವ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಾಕ್ಟೀಸ್ ನಡೆಸುತ್ತಿದೆ.
ಕ್ರೀಡಾಂಗಣದಲ್ಲಿ ಟೀಮ್ ಡೇವಿಡ್ ಈಜಾಟ..!
ಐಪಿಎಲ್ ಆರಂಭಕ್ಕೆ ಕೌಂಟ್ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಸೆಣಸಾಟ ನಡೆಸಲಿವೆ. ಇದರ ಮಧ್ಯೆ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಚಿನ್ನಸ್ವಾಮಿ ಮೈದಾನದಲ್ಲಿ RCB ತಂಡದ ಆಟಗಾರ ಟಿಮ್ ಡೇವಿಡ್ (tim david) ಈಜಾಡಿದ್ದಾರೆ.
ಹೌದು ಆರ್ಸಿಬಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರ ವಿಡಿಯೋವೊಂದನ್ನು ಶೇರ್ ಮಾಡಿದೆ. ವಿಡಿಯೋದಲ್ಲಿ ಮಳೆ ಬರುವ ಸಂದರ್ಭದಲ್ಲಿ ಟಿಮ್ ಡೇವಿಡ್ ಚಿನ್ನಸ್ವಾಮಿ ಮೈದಾನದಲ್ಲಿ ಈಜಾಡಿ ಎಂಜಾಯ್ ಮಾಡಿದ್ದಾರೆ.
ಮೈದಾನದಲ್ಲಿ ನಿಂತಿರುವ ಮಳೆ ನೀರಿನಲ್ಲಿ ಮುಖ ತೊಳೆದ ಟಿಮ್ ಡೇವಿಡ್, ಬಳಿಕ ಓಡಿ ಹೋಗಿ ನೀರಲ್ಲಿ ಡೈವ್ ಮಾಡಿದ್ದಾರೆ. ಸ್ನಾನ ಮುಗಿಸಿ ಡ್ರೆಸ್ಸಿಂಗ್ ರೂಮ್ಗೆ ಬರುವ ಟಿಮ್ ಡೇವಿಡ್ ಅವರನ್ನು ಚಪ್ಪಳೆ ತಟ್ಟಿ RCB ತಂಡ ಸ್ವಾಗತಿಸಿದೆ.
Video ಕೃಪೆ: RCB X