ದೊಡ್ಡಬಳ್ಳಾಪುರ: ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಿಗದಿಯಾಗಿದೆ.
ಈ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹುಸ್ಕೂರು ಆನಂದ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರಿನ ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ಹುಸ್ಕೂರು ಆನಂದ್ ನಾಮಪತ್ರ ಸಲ್ಲಿಸಿದ್ದಾರೆ.
ಅಚ್ಚರಿಯ ಬೆಳವಣಿಗೆಯಲ್ಲಿ ಹುಸ್ಕೂರು ಆನಂದ್ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಹರಿತಲೇಖನಿಗೆ ಖಚಿತ ಮೂಲಗಳಿಂದ ಮಾಹಿತಿಯಿಂದ ತಿಳಿದು ಬಂದಿದೆ. ಅಧಿಕೃತ ಘೋಷಣೆ ಬಾಕಿ ಉಳಿದಿದೆ ಎನ್ನಲಾಗಿದೆ.
ಇನ್ನೂ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಹುಸ್ಕೂರು ಆನಂದ್ ಅವರು, ಎನ್.ಡಿಎನ್‌ಎ ಮೈತ್ರಿಗೆ ಗೌರವ ನೀಡದ ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ಮುಖಂಡರ ನಿಲುವು ಬೇಸರ ತರಿಸಿದೆ.
ವರಿಷ್ಠರ ಜೊತೆ ಮಾತನಾಡದೆ, ಮೈತ್ರಿ ನಿಯಮ ಪಾಲನೆ ಮಾಡದೇ ಏಕಾಏಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆ ಮಾಡಿ ನಾಮಪತ್ರ ಸಲ್ಲಿಸಿರುವುದು, ಜೆಡಿಎಸ್ ಪಕ್ಷವನ್ನು ಮೂಲೆಗುಂಪು ಮಾಡುವ ಅವರ ಹುನ್ನಾರ ಬಯಲಾಗಿದೆ.
ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಸಲು, ದೊಡ್ಡಬಳ್ಳಾಪುರ ತಾಲೂಕಿನ ರೈತರ ಅಭಿವೃದ್ಧಿಗಾಗಿ ಬಮೂಲ್ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲಾಗಿದೆ ಎಂದು ಹುಸ್ಕೂರು ಆನಂದ್ ಹೇಳಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ವಿಜಯಕುಮಾರ್, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯೆ ಕಲ್ಪನಾ ಆನಂದ್, ನ್ಯಾಯವಾದಿ ಸತೀಶ್ ಮತ್ತಿತರರಿದ್ದರು.