DK Suresh elected unopposed as director of Bamul

ಬಮುಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸ್ಪರ್ಧೆ.. ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ಅವರು ಶನಿವಾರ ನಾಮಪತ್ರ ಸಲ್ಲಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.

ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ‌ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ. ನಾನು ಅವರೆಲ್ಲರ ಜೊತೆ ಇರಬೇಕು ಎಂದು ಒತ್ತಾಯ ಮಾಡಿದ ಕಾರಣಕ್ಕೆ ಜೊತೆಯಾಗಿ ನಿಂತಿದ್ದೇನೆ” ಎಂದರು.

“ಪಕ್ಷದ ನಾಯಕರು, ಮುಖಂಡರ‌ ಬಳಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವೊಂದು ವಿಚಾರಗಳಲ್ಲಿ ಅವರ ಮಾತುಗಳಿಗೂ ನಾವು ಗೌರವ ನೀಡಬೇಕಾಗುತ್ತದೆ. ಎಲ್ಲರ ಸಲಹೆ ಸೂಚನೆ ಮೇರೆಗೆ ಅರ್ಜಿ ಸಲ್ಲಿಸಿದ್ದೇನೆ” ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಒಪ್ಪದ ನೀವು ಈಗ ನಿರ್ದೇಶಕ ಸ್ಥಾನಕ್ಕೆ ಒಪ್ಪಿರುವುದು ಕುತೂಹಲಕ್ಕೆ ಕಾರಣವಾಗಿ ಎಂದು ಕೇಳಿದಾಗ, “ಜಿಲ್ಲೆಯ ಶಾಸಕರು, ಮಾಜಿ ನಿರ್ದೇಶಕರು, ಅಧ್ಯಕ್ಷರುಗಳು, ಅನೇಕ‌ ಜಿಲ್ಲೆಯ ನಾಯಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದಾಗ ನಾನು ಅವರ ಮಾತುಗಳಿಗೆ ಪಕ್ಷದ ಕಾರ್ಯಕರ್ತನಾಗಿ ತಲೆಬಾಗಬೇಕಾಗುತ್ತದೆ. ಹಿರಿಯರ ಮಾತುಗಳನ್ನು ಸ್ವೀಕಾರ ಮಾಡಿದ್ದೇನೆ, ಕಾದು ನೋಡೋಣ” ಎಂದರು.

ನಿಮ್ಮ ವಿರುದ್ಧ ಅಭ್ಯರ್ಥಿ ಹಾಕುವ ಬಗ್ಗೆ ರಾಮನಗರದಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ತಿಳಿಸಿದರು.

ಅಶೋಕ್ ಅವರಿಗೆ ಯೋಗ್ಯತೆ, ಅರ್ಹತೆ ಇದೆ

ಬಿಡದಿ ಟೌನ್ ಶಿಪ್ ಕುರಿತು ಆರ್.ಅಶೋಕ್ ಸೇರಿದಂತೆ ಅನೇಕರಿಂದ ನಿಮ್ಮ ಮೇಲೆ ಭೂಕಬಳಿಕೆ ಆರೋಪದ ಕುರಿತು ಕೇಳಿದಾಗ, “ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಕಬಳಿಕೆ ಕುರಿತು ನಾನು ಮಾತನಾಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ” ಎಂದರು.

ಕುಮಾರಸ್ವಾಮಿ ಆಶಯದಂತೆ ನಮ್ಮ ಕೆಲಸ

ರೈತರ ವಿರೋಧದ ಬಗ್ಗೆ ಕೇಳಿದಾಗ, “ನಾವು ಯಾವುದೇ ಭೂಸ್ವಾಧೀನ ಪ್ರಕ್ರಿಯೆ ನಡೆಸಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಮಾಡಿದ್ದನ್ನು ಮುಂದುವರೆಸಲಾಗಿದೆ.

ಕುಮಾರಸ್ವಾಮಿ ಅವರ ಆಶಯದಂತೆ ಉಪನಗರಗಳು ರಚನೆಯಾಗಬೇಕು ಎಂದು ಅವರದೇ ಸರ್ಕಾರದ ಅವಧಿಯಲ್ಲಿ ತೀರ್ಮಾನವಾಗಿತ್ತು. ಅದನ್ನು ನಾವು ಮುಂದುವರೆಸುತ್ತಿದ್ದೇವೆ. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ.

ಉಪಮುಖ್ಯಮಂತ್ರಿಯವರು ಆ ಭಾಗದ ರೈತರಿಗೆ ಖಂಡಿತವಾಗಿ ನ್ಯಾಯ ಒದಗಿಸಿ‌ಕೊಡುತ್ತಾರೆ. ಇದು ನಮ್ಮ ಜವಾಬ್ದಾರಿ ಕೂಡ” ಎಂದು ಹೇಳಿದರು.

ಶಾಸಕ ಬಾಲಕೃಷ್ಣ, ರಂಗನಾಥ್, ಶರತ್ ಬಚ್ಚೇಗೌಡ, ಎಂಎಲ್ಸಿ ಎಸ್ ರವಿ, ಕಾಂಗ್ರೆಸ್ ಮುಖಂಡರಾದ ಬಿ ವಿ ಶ್ರೀನಿವಾಸ್, ಆರ್ ಕೆ ರಮೇಶ್ ಮತ್ತಿತರರು ಜತೆಗಿದ್ದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]