ಬೆಂ. ಗ್ರಾಂ.ಜಿಲ್ಲೆ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ (Internal reservation survey) ಅವಧಿಯನ್ನು ವಿಸ್ತರಿಸಲಾಗಿದ್ದು ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ.
ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ವನ್ನು ಮೇ 25 ರಿಂದ 28 ವರೆಗೆ ಹಾಗೂ ಅನ್ ಲೈನ್ ಮೂಲಕ ಸ್ವಯಂ ಘೋಷಿಸಲು ಮೇ 19 ರಿಂದ 28 ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಹೆಚ್.ಎನ್ ನಾಗಮೋಹನ್ ದಾಸ್, ಅವರ ವಿಚಾರಣಾ ಆಯೋಗದ ವರದಿಯಂತೆ ಸರ್ಕಾರವು ಪರಿಶಿಷ್ಟ ಜಾತಿಗಳ ವಿವಿಧ ದತ್ತಾಂಶಗಳನ್ನು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಮೂಲಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಾಯವಾಣಿ ಸಂಖ್ಯೆ:9480843053 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.