ಬೆಂ.ಗ್ರಾ.ಜಿಲ್ಲೆ: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ (Guarantees Scheme) ಬದುಕಿಗೆ ಬೆಳಕಾದ ಗ್ಯಾರಂಟಿಗಳು-ನುಡಿದಂತೆ ನಡೆದಿದ್ದೇವೆ ಹೆಸರಿನ ಕಿರು ಹೊತ್ತಿಗೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬಿಡುಗಡೆಗೊಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಿದ್ಧಪಡಿಸಿದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಅನುರಾಧ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ, ಸೇರಿದಂತೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.