Industrial waste dumped in Hosahalli forest area: FIR lodged

Video: ಹೊಸಹಳ್ಳಿ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ.. FIR ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊಸಹಳ್ಳಿ, ಗುಂಡಮಗೆರೆ ವ್ಯಾಪ್ತಿಯಲ್ಲಿನ ಮಾಕಳಿ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಹಲವು ಟ್ಯಾಂಕರ್‌ಗಳ ಮೂಲಕ ರಾಸಾಯನಿಕ ಯುಕ್ತ ಕೈಗಾರಿಕಾ ತ್ಯಾಜ್ಯ ನೀರನ್ನು ಸುರಿಯಲಾಗಿರುವ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು (FIR) ದಾಖಲಾಗಿದೆ.

ಅಪರಿಚಿತ ದುಷ್ಕರ್ಮಿಗಳು ಕೈಗಾರಿಕಾ ತ್ಯಾಜ್ಯ ನೀರು ಹರಿಬಿಟ್ಟಿರುವ ಕಾರಣ ಸುಮಾರು ಒಂದು ಕಿ.ಮೀ ದೂರದವರೆಗೂ ತ್ಯಾಜ್ಯ ನೀರಿನ ದುರ್ನಾತ ಬೀರುತ್ತಿದೆ.

ಈ ವ್ಯಾಪ್ತಿಯ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತ್ಯಾಜ್ಯ ನೀರು ಹರಿದು ಹೋಗಿರುವ ಕಾಲುವೆಗಳ ಅಕ್ಕಪಕ್ಕ ಸಣ್ಣಪುಟ್ಟ ಮರ, ಗಿಡ, ಹುಲ್ಲು ಬೆಂಕಿಯಿಂದ ಸುಟ್ಟಂತೆ ಒಣಗಿ ಹೋಗಿವೆ. ಈ ತ್ಯಾಜ್ಯ ನೀರು ಸುರಿದಿರುವ ಸಮೀಪವೇ ಗುಂಡಮಗೆರೆ ಕೆರೆಗೆ ನೀರು ಹರಿದು ಹೋಗುವ ಅರಣ್ಯ ಪ್ರದೇಶದಲ್ಲಿ ಬೃಹತ್ ಹಳ್ಳವು ಇದೆ. ಹಾಗಾಗಿ ಅಲ್ಪಸ್ವಲ್ಪ ಮಳೆ ಬಂದರು ಸಹ ತ್ಯಾಜ್ಯ ನೀರು ನೇರವಾಗಿ ಕೆರೆ ಸೇರುವ ಅಪಾಯ ಎದುರಾಗಿದೆ.

ತಾಲ್ಲೂಕಿನಲ್ಲೇ ಅತ್ಯಂತ ವಿಶಾಲವಾದ ಹಾಗೂ ಬೇಸಿಗೆ, ಮಳೆಗಾಲ ಎಲ್ಲಾ ಸಂದರ್ಭದಲ್ಲೂ ಈ ಕೆರೆಯಲ್ಲಿ ನೀರು ಇರುತ್ತವೆ. ಗುಂಡಮಗೆರೆ ಕರೆ ಸುತ್ತಲು ಮಾಕಳಿ ದುರ್ಗ, ಜಾಲಿಗೆ ಬೆಟ್ಟದ ಸಾಲು ಸೇರಿದಂತೆ ವಿಶಾಲವಾದ ಕುರುಚಲು ಅರಣ್ಯ ಪ್ರದೇಶವು ಇರುವುದರಿಂದ ಈ ಕೆರೆ ಹಾಗೂ ಕೆರೆಗೆ ನೀರು ಹರಿದು ಬರುವ ಬೃಹತ್ ಹಳ್ಳವನ್ನು ಹತ್ತಾರು ಪ್ರಾಣಿ, ಪಕ್ಷಿಗಳು ಕುಡಿಯುವ ನೀರಿಗೆ ಅವಲಂಭಿಸಿವೆ.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತ-ಮುತ್ತಲಿನ ಗ್ರಾಮಗಳ ಜನರು ಜಾಗೃತರಾಗಿರುವ ಹಾಗೂ ರಾತ್ರಿ ವೇಳೆ ಗ್ರಾಮದ ರೈತರು ಗಸ್ತುಗಳನ್ನು ನಡೆಸುವುದರಿಂದ ತ್ಯಾಜ್ಯ ನೀರು ವಿಲೇವಾರಿಗೆ ಕೈಗಾರಿಕೆ ಮಾಲೀಕರು ಗುಂಡಮಗೆರೆ ಅರಣ್ಯ ಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಪ್ರದೇಶದಲ್ಲಿ ಚಿರತೆ ಹಾಗೂ ಇತರೆ ಕಾಡು ಪ್ರಾಣಿಗಳ ಭಯದಿಂದ ರಾತ್ರಿ ವೇಳೆ ಜನ ಸಂಚಾರ ಅತ್ಯಂತ ವಿರಳ. ಹೀಗಾಗಿ ಟ್ಯಾಂಕರ್‌ಗಳ ಮೂಲಕ ತ್ಯಾಜ್ಯ ನೀರನ್ನು ತಂದು ರಾತ್ರಿ ವೇಳೆ ಸುಲಭವಾಗಿ ಸುರಿದು ಹೋಗುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಅರಣ್ಯ ಇಲಾಖೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿ ತಕ್ಷಣ ಎಚ್ಚೆತ್ತುಕೊಂಡು ತ್ಯಾಜ್ಯ ನೀರು ಸುರಿಯುತ್ತಿರುವ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!