ಅಮರಾವತಿ: ಆಗಸ್ಟ್ 15 ರಿಂದ ಆಂಧ್ರಪ್ರದೇಶದಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಉಚಿತ (Free) ಬಸ್ ಸಂಚಾರ ನೀಡುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಹೇಳಿದ್ದಾರೆ.
ಆಗಸ್ಟ್ 15 ರಿಂದ ಆಂಧ್ರಪ್ರದೇಶದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.
ಈ ಮೂಲಕ ದಕ್ಷಿಣ ಭಾರತದ ರಾಜ್ಯಗಳದ ತಮಿಳುನಾಡು, ಕರ್ನಾಟಕ, ತೆಲಂಗಾಣ ಬಳಿಕ ಆಂಧ್ರಪ್ರದೇಶದಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆತಂತಾಗಿದೆ.
ಇತ್ತೀಚೆಗಷ್ಟೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ಆಂಧ್ರಪ್ರದೇಶ ಸರ್ಕಾರದ ನಿಯೋಗ, ಇಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಕುರಿತು ಮಾಹಿತಿ ಪಡೆದಿತ್ತು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಹಣವನ್ನು ಯಾವ ರೀತಿ ಇಲಾಖೆ ಭರಿಸುತ್ತಿದೆ ಎಂಬ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿತ್ತು.