State government should immediately send out Bangladeshi and Pakistani nationals: R. Ashoka

ಮದ್ಯ ದರ ಮತ್ತೆ ಹೆಚ್ಚಳ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ (R Ashoka) ಆರೋಪಿಸಿದ್ದಾರೆ.

ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಎಷ್ಟು ಸಲ ಹೆಚ್ಚಳ?

ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ – ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್ಲ ಎಂಬ ಕಾರಣಕ್ಕೆ ಇಂತಹ ಕ್ರಮ ಅನುಸರಿಸುವುದು ಒಳ್ಳೆಯದಲ್ಲ.

ಸರಿಯಾದ ಆರ್ಥಿಕ ಶಿಸ್ತು ಮತ್ತು ಸಿದ್ಧತೆಗಳಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತ ಗೊಂಡಿವೆ. ಬೊಕ್ಕಸ ಬರಿದಾಗಿ ಸರ್ಕಾರ ದಿವಾಳಿಯಾಗಿದೆ.

ಇದನ್ನು ಹೇಗಾದರೂ ಸರಿಪಡಿಸಿಕೊಳ್ಳಲು ಹೆಣಗುತ್ತಿರುವ ಸರ್ಕಾರ, ಸಿಕ್ಕ ಸಿಕ್ಕ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದೆ. ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಾಗಿ ಇಂತಹ ದರ ಮತ್ತು ಶುಲ್ಕ ಹೆಚ್ಚಳದಂತಹ ವಾಮ ಮಾರ್ಗಗಳ ಮೂಲಕ ಸರ್ಕಾರ ಉದ್ಯಮವನ್ನು ಶೋಷಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ನೂರು ಪಟ್ಟು ಹೆಚ್ಚಳ

ಮದ್ಯ ಉತ್ಪಾದನೆ, ಬಾಟ್ಲಿಂಗ್, ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇಕಡಾ ನೂರರಷ್ಟು ಹೆಚ್ಚಳಕ್ಕೆ ಮುಂದಾಗಿದೆ. ಇದಕ್ಕಾಗಿ ಅಬಕಾರಿ ಕಾನೂನುಗಳಿಗೆ ತಿದ್ದುಪಡಿ ಮಾಡಿ ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದೆ. ಜುಲೈ 1 ರಿಂದ ಪರಿಷ್ಕೃತ ದರಗಳು ಜಾರಿಗೊಳ್ಳಲಿವೆ. ಆ ಮೂಲಕ ಉದ್ಯಮದ ಅಂತ್ಯಕ್ಕೆ ಮೊಳೆ ಹೊಡೆದಂತಾಗಲಿದೆ ಎಂದಿದ್ದಾರೆ.

ಇಲಾಖೆಗೆ 40 ಸಾವಿರ ಕೋಟಿಯ ಗುರಿ ನಿಗದಿ ಮಾಡಲಾಗಿದೆ. ಇದನ್ನು ತಲುಪಲು ಅಧಿಕಾರಿಗಳು ಇದ್ದಬದ್ದ ಎಲ್ಲಾ ಅವಕಾಶಗಳನ್ನು ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಉದ್ಯಮವನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ

ಉದ್ಯಮದ ಹಿತದೃಷ್ಟಿಯಿಂದ ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಬಿಟ್ಟು ಉದ್ಯಮ, ಮಾರಾಟಗಾರರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಸನ್ನದು ಶುಲ್ಕ ಪರಿಷ್ಕರಣೆಯನ್ನು ಮರು ಪರಿಶೀಲಿಸಬೇಕು ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!