ಬೆಳ್ತಂಗಡಿ: ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ (Suspiciously death) ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ಎಸ್.ನಾಯರ್ (22) ಮೃತರು ಎನ್ನಲಾಗಿದೆ.
ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿರುವ ಆಕಾಂಕ್ಷಾ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು.
ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತಳ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.