ಕರ್ನೂಲ್: ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ, ಪ್ರವಾಸಕ್ಕೆ ತೆರಳಿದ್ದ ತುಮಕೂರು ಮೂಲದ ಮೂವರು ಯುವಕರು ಕಾರು ಅಪಘಾತದಲ್ಲಿ (Accident) ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ (Kurnool) ಬಳಿ ನಡೆದಿದೆ.
ಕೆಂಕೆರೆ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48 ವರ್ಷ), ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಂತೋಷ್ (35 ವರ್ಷ), ಲೋಕೇಶ್ (38 ವರ್ಷ) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಇವರು ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಆರು ಮಂದಿ ಸ್ನೇಹಿತರು ಕಾರಿನಲ್ಲಿ ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಮೃತ ಯುವಕರ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.