BY Vijayendra demands Rs 50 lakh compensation

ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಪ್ರಶ್ನಿಸಿದ್ದಾರೆ.

ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರ, ಮುಖ್ಯಮಂತ್ರಿಗಳು ನಾಳೆ ಎರಡು ವರ್ಷಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದರು.

ನಿರಂತರವಾಗಿ ಬೆಲೆ ಏರಿಕೆ ಮಾಡುತ್ತ ಬಂದಿದ್ದೀರಿ. ರಾಜ್ಯದಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಸತತವಾಗಿ ನಡೆಯುತ್ತಿದೆ ಎಂದು ಟೀಕಿಸಿದರು.

ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ರೈತರಿಗೆ ಯಾವುದೇ ಹೊಸ ಯೋಜನೆ ನೀಡಲು ಸಾಧ್ಯವಾಗಿಲ್ಲ. ಮಹಿಳೆಯರಿಗೆ ಯಾವುದೇ ಅಭಿವೃದ್ಧಿ ಯೋಜನೆ ಪ್ರಕಟಿಸಿಲ್ಲ, ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿ ಸ್ವಾಭಿಮಾನದ ಬದುಕನ್ನು ನೀಡಿಲ್ಲ ಎಂದು ಆಕ್ಷೇಪಿಸಿದರು.

ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ. ಸ್ವಲ್ಪ ಮಳೆಯಾದರೂ ಬೆಂಗಳೂರು ಮಹಾನಗರ ನೀರಿನಲ್ಲಿ ಮುಳುಗುವಂತಾಗಿದೆ. ಡಿಕೆ ಶಿವಕುಮಾರ್ ಅವರು ದೊಡ್ಡ ಯೋಜನೆಗಳ ಮಾತನಾಡುತ್ತಾರೆ. ಬೆಂಗಳೂರು ನಗರದಲ್ಲಿ ವೇಗದಿಂದ ಮತ್ತು ಸಕಾಲದಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿಲ್ಲ. ಮೆಟ್ರೊವನ್ನು ತುಮಕೂರಿಗೆ ಒಯ್ಯುವ ಮಾತನಾಡುತ್ತಾರೆ ಎಂದು ದೂರಿದರು.

ಅಭಿವೃದ್ಧಿ ಎಂಬುದು ಸಂಪೂರ್ಣ ಸ್ಥಗಿತ

ಅಭಿವೃದ್ಧಿ ಎಂಬುದು ಸಂಪೂರ್ಣವಾಗಿ ನಿಂತುಹೋಗಿದೆ. ಎರಡು ವರ್ಷದಲ್ಲಿ ಏನು ಮಾಡಿದ್ದಾರೆ? ಆಡಳಿತ ಪಕ್ಷದ ಶಾಸಕರು ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಬೇಸತ್ತಿರುವುದು ಜಗಜ್ಜಾಹೀರಾಗಿದೆ ಎಂದು ನುಡಿದರು.

ಮೊದಲ ಬಾರಿ ಗೆದ್ದ ಶಾಸಕರಾದ ನಾವು ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಶಾಲಾ ಕೊಠಡಿ ಕಟ್ಟಿಸಲೂ ಸಾಧ್ಯವಾಗುತ್ತಿಲ್ಲ ಎಂದು ವಿಜಯೇಂದ್ರ ಅವರು ಗಮನ ಸೆಳೆದರು.

ಶಾಸಕರಿಗೆ ಆಸ್ಪತ್ರೆಗಳಿಗೆ ಮೂಲಸೌಕರ್ಯ ಕೊಡಲಾಗುತ್ತಿಲ್ಲ, ನೀರಾವರಿ ಸೌಕರ್ಯ ನೀಡಲು ಆಗುತ್ತಿಲ್ಲ, ಇಷ್ಟೆಲ್ಲ ಇದ್ದರೂ ರಾಜ್ಯ ಸರಕಾರ ದುಂದು ವೆಚ್ಚ ಮಾಡುತ್ತಿದೆ. ಸರಕಾರದ ಬಗ್ಗೆ ರಾಜ್ಯದ ಜನರು ನಗುತ್ತಿದ್ದಾರೆ, ಸರಕಾರದ ನಡವಳಿಕೆಯನ್ನು ಜನರು ಟೀಕಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶೂನ್ಯ ಸಾಧನೆಯ ಸಾಧನಾ ಸಮಾವೇಶ

ಇದೊಂದು ಭಂಡ ಸರಕಾರ. ಜಾಹೀರಾತು ನೀಡುವ ಜಾಹೀರಾತಿನ ಸರಕಾರ ಇದು. ಗ್ಯಾರಂಟಿಗಳನ್ನೂ ಸರಿಯಾಗಿ ತಲುಪಿಸದೆ ನಾಡಿನ ಜನರಿಗೆ ಮೋಸ ಮಾಡಿದ್ದಾರೆ.

ಶೂನ್ಯ ಸಾಧನೆಯ ಸಾಧನಾ ಸಮಾವೇಶ ಇದು ಎಂದು ಟೀಕಿಸಿದರು. ರಾಜ್ಯದ ಜನರಿಗೆ ಈ ಸರಕಾರದ ಬಗ್ಗೆ ಏನೂ ಒಳ್ಳೆಯ ಅಭಿಪ್ರಾಯ ಇಲ್ಲ ಎಂದು ನುಡಿದರು.

ಗ್ಯಾರಂಟಿಗಳನ್ನು ಪೂರೈಸಲು ಹಣ

ಹೊಂದಿಸುವುದನ್ನು ಸರಕಾರ ಮಾಡಲೇಬೇಕು. ಆದರೆ, ಗ್ಯಾರಂಟಿ ಕೊಡುವುದೇ ಸಾಧನೆಯೇ? ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೆಲಸ ಆಗಬಾರದೇ? ಎಂದು ಪ್ರಶ್ನೆಗೆ ಉತ್ತರ ನೀಡಿದರು. ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗದ ಸ್ಥಿತಿ ಬಂದಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಆಗುತ್ತಿಲ್ಲ; ಸೂರಿಲ್ಲದ ಬಡವರಿಗೆ ಮನೆ ಕೊಡಲು ಇವರಿಗೆ ಸಾಧ್ಯವಾಗಿದೆಯೇ? ಗಂಗಾ ಕಲ್ಯಾಣ ಯೋಜನೆಯಡಿ ಬಿಜೆಪಿ ಸರಕಾರ ಇದ್ದಾಗ ಪ್ರತಿ ಕ್ಷೇತ್ರಕ್ಕೆ 20-25 ಸಂಪರ್ಕ ಕೊಡುತ್ತಿದ್ದರು. ಈಗ ಒಂದು ಎರಡು ಎಂಬಂತೆ ಭಿಕ್ಷೆ ರೀತಿಯಲ್ಲಿ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಾಧನಾ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಯಡಿಯೂರಪ್ಪ ಅವರು ಹೆಚ್ಚುವರಿ ಮೊತ್ತ ಕೊಡುತ್ತಿದ್ದರು. ಅದನ್ನೂ ನಿಲ್ಲಿಸಿದ್ದಾರೆ. ರೈತ ವಿದ್ಯಾನಿಧಿಯನ್ನೂ ನಿಲ್ಲಿಸಿದ್ದಾರೆ. ಒಂದೆಡೆ ಬಿಜೆಪಿ ಸರಕಾರದ ಯೋಜನೆಗಳನ್ನು ನಿಲ್ಲಿಸುತ್ತಾರೆ. ಅಭಿವೃದ್ಧಿಪರ ಚಿಂತನೆ ಸರಕಾರಕ್ಕೆ ಇಲ್ಲ. ಇದರ ನಡುವೆ ಸಾಧನಾ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.

ಜಾಹೀರಾತಿನ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ವಿಪಕ್ಷದವರು ಟೀಕಿಸುವುದಾಗಿ ಗೂಬೆ ಕೂರಿಸುತ್ತಾರೆ. ಆದರೆ, ಇವತ್ತು ಅಭಿವೃದ್ಧಿ ಇಲ್ಲದ ಕುರಿತು ಆಡಳಿತ ಪಕ್ಷದವರೇ ಮಾತನಾಡುತ್ತಿದ್ದಾರಲ್ಲವೇ ಎಂದು ಪ್ರಶ್ನಿಸಿದರು.

ನಾವು ರಾಜ್ಯ ಸರಕಾರವನ್ನು ಎಚ್ಚರಿಸಲು ನಿರಂತರ ಹೋರಾಟ ಮಾಡುತ್ತಿದ್ದೇವೆ. ಈಚೆಗೆ ಜನಾಕ್ರೋಶ ಯಾತ್ರೆಯನ್ನೂ ಮಾಡಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ನಾಡಿನ- ಬೆಂಗಳೂರಿನ ಅಭಿವೃದ್ಧಿ ಶೂನ್ಯತೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಹೊಣೆ ಹೊರಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!