Doddaballapur: Applications invited for Atma Shreshtha Krushika Award

ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಬೆಂ.ಗ್ರಾಂ.ಜಿಲ್ಲೆ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ (Agriculture Department) ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಈವರೆಗೆ 95 ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, 66 ಬಿತ್ತನೆ ಬೀಜದ ಮಾದರಿಗಳು, 36 ರಸಗೊಬ್ಬರ ಮಾದರಿಗಳು ಮತ್ತು 21 ಕೀಟನಾಶಕ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟ ಪರಿಶೀಲನೆಗಾಗಿ ಕಳುಹಿಸಿದ್ದು, ಇದರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು.

ರೈತರು ಹೊಲಗಳಲ್ಲಿ ಕಂದಕ, ಬದುಗಳನ್ನು ನಿರ್ಮಿಸಿ

ಜಲಾನಯನ ಹಾಗೂ ನರೇಗಾ ಯೋಜನೆಯಡಿ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ ಇಂಗು ಗುಂಡಿಗಳನ್ನು (5 ಮೀ ಉದ್ದ , 1 ಮೀ ಅಗಲ, 2ಅಡಿ ಆಳ) ನಿರ್ಮಾಣ ಮಾಡಿಕೊಳ್ಳಬೇಕು.

ಈ ರೀತಿಯಲ್ಲಿ ಎಕರೆಗೆ 20 ಕಂದಕಗಳನ್ನು ನಿರ್ಮಿಸಿದರೆ, ಒಂದು ಕಂದಕದಿಂದ 3 ಸಾವಿರ ಲೀಟರ್ ನಂತೆ, ಒಟ್ಟಾರೆ 20 ಕಂದಕದಿಂದ 50 ಸಾವಿರ ಲೀಟರ್ ನೀರನ್ನು ಸಂಗ್ರಹಿಸಬಹುದು. ಹೀಗೆ ವರ್ಷದಲ್ಲಿ ಬೀಳುವ 8 ರಿಂದ 10 ಮಳೆಗೆ ಕನಿಷ್ಠ 5 ಲಕ್ಷ ಲೀಟರ್ ನೀರನ್ನು ಶೇಖರಿಸಬಹುದು.

ಈ ರೀತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಎಲ್ಲಾ ಕೊಳವೆ ಬಾವಿಗಳಲ್ಲಿ ನೀರು ಸಿಗುವ ಲಭ್ಯತೆ ಹೆಚ್ಚಾಗುತ್ತದೆ. ಮಳೆಗಾಲ ಮುಗಿದ ನಂತರ ಟ್ಯಾಂಕರ್ ನೀರಿನ ಮೇಲಿನ ಅವಲಂಬನೆ ಕ್ರಮೇಣ ಕಡಿಮೆಯಗುತ್ತದೆ.

ದೇಸಿ ತಳಿ ಇದ್ದರೆ ನೋಂದಾಯಿಸಿಕೊಳ್ಳಿ

ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ವತಿಯಿಂದ ಸಂರಕ್ಷಣೆ ಮತ್ತು ಉತ್ತೇಜನ ನೀಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರಾಯಿಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಭತ್ತ,ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು,ಹುಚ್ಚೆಳ್ಳು, ಕಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ ಮತ್ತು ಬರಗು ಆಯ್ಕೆಯಾದ ಬೆಳೆಗಳಾಗಿವೆ.

ಹಾಗೇ ಜಾನುವಾರು ಸಾಕಾಣಿಕೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಮತ್ತು ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರನ್ನು ಕೃಷಿ ಇಲಾಖೆಯು ಪ್ರೋತ್ಸಾಹಿಸಲಾಗುತ್ತದೆ. ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳನ್ನು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ ಪರಾರಿ!

ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ

ಮೊಮ್ಮಗನ ಜನ್ಮದಿನಕ್ಕೆ ತೆರಳಿದ್ದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆಯ ಬಾಗಲು ಮೀಟಿ ಲಕ್ಷಾಂತರ ರೂ. ಒಡವೆ, ನಗದು ದೋಚಿ (Theft) ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ

[ccc_my_favorite_select_button post_id="115029"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!