Bamul elections: Doddaballapura Congress calls for press conference after JDS..!

ಬಮೂಲ್ ಚುನಾವಣೆ: ಜೆಡಿಎಸ್ ಬೆನ್ನಲ್ಲೇ ಸುದ್ದಿಗೋಷ್ಠಿಗೆ ಕರೆ ನೀಡಿದ ದೊಡ್ಡಬಳ್ಳಾಪುರ ಕಾಂಗ್ರೆಸ್..!

ದೊಡ್ಡಬಳ್ಳಾಪುರ: ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ.

ಇಂದು ನಗರದ ಜೆಡಿಎಸ್ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದ್ದು, ಜೆಡಿಎಸ್‌ (JDS) ಪಕ್ಷದಿಂದ ಹುಸ್ಕೂರ್ ಆನಂದ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ.

ಬಮೂಲ್ ಚುನಾವಣೆ: ಜೆಡಿಎಸ್ ಬೆನ್ನಲ್ಲೇ ಸುದ್ದಿಗೋಷ್ಠಿಗೆ ಕರೆ ನೀಡಿದ ದೊಡ್ಡಬಳ್ಳಾಪುರ ಕಾಂಗ್ರೆಸ್..!

ಆ ಮೂಲಕ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿ ಇಲ್ಲ ಎಂದು ಮೂದಲಿಸಿದವರಿಗೆ ತಕ್ಕ ಉತ್ತರ ನೀಡಿ, ಪಕ್ಷ ಸದೃಢವಾಗಿದೆ ಎನ್ನುವುದನ್ನು ವರಿಷ್ಟರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅಭ್ಯರ್ಥಿಗೆ ಇತರ ಪಕ್ಷಗಳ ಬೆಂಬಲವನ್ನು ಸಹ ಕೋರಲಾಗಿದೆ ಎಂದು

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಸದೃಢವಾಗಿದ್ದು, ಹೆಚ್ಚಿನ ಮತದಾರರಿದ್ದಾರೆ. ಸಹಜವಾಗಿ ಹೆಚ್ಚಿನ ಸಂಖ್ಯೆಯಲ್ಲಿರುವವರಿಗೆ ಪ್ರಾತಿನಿಧ್ಯ ನೀಡಬೇಕಿದ್ದು, ದೇವನಹಳ್ಳಿಯಲ್ಲಿ ಸಹ ಜೆಡಿಎಸ್ ಬೆಂಬಲಿತರನ್ನು ಕಣಕ್ಕಿಳಿಸಲಾಗಿದೆ.

ಈ ಬಗ್ಗೆ ಪಕ್ಷದ ವರಿಷ್ಟರಿಗೂ ತಿಳಿಸಲಾಗಿದೆ. ದೊಡ್ಡಬಳ್ಳಾಪುರದ ಅಭ್ಯರ್ಥಿ ಆನಂದ್ ಸ್ಪರ್ಧೆ ಬಗ್ಗೆ ಆರಂಭದಲ್ಲಿ ತೊಡಕಾಗಿದ್ದು, ಈಗ ಎಲ್ಲಾ ಸಮಸ್ಯೆ ಬಗೆ ಹರಿದಿದೆ. ಆದರೆ ಈಗ ಹಿಂದಿನ ನಿರ್ದೇಶಕರುಗಳ ಆಯ್ಕೆ ಬಗ್ಗೆ ನ್ಯಾಯಾಲಯದಲ್ಲಿ ಸದ್ಯಕ್ಕೆ ತಡೆಯಾಜ್ಞೆ ಇದ್ದು, ನಿರ್ದೇಶಕರ ಸ್ಥಾನಕ್ಕೆ ಯಾವಾಗ ಚ್ಯುತಿ ಬರುತ್ತದೆಯೋ ಗೊತ್ತಿಲ್ಲ. ಹಾಗಾಗಿ ಮತ ವ್ಯರ್ಥವಾಗುವುದು ಬೇಡ.

ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಪ್ಪಯ್ಯಣ್ಣ ಅವರು ಬಮೂಲ್‌ನಲ್ಲಿ ಸಾಕಷ್ಟು ಕೆಲಸ ಮಾಡಿ, ಶೀಥಲೀಕರಣ ಘಟಕ ಸ್ಥಾಪಿಸಲು ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ, ಬಮೂಲ್ ಚುನಾವಣೆಯ ಮತದಾರರು ಹುಸ್ಕೂರು ಆನಂದ್.ಟಿ ಅವರನ್ನು ಬೆಂಬಲಿಸಬೇಕಿದೆ.

ಕಾಂಗ್ರೆಸ್ ಅಭ್ಯರ್ಥಿ ಇಲ್ಲದಿರುವುದರಿಂದ ನಮ್ಮನ್ನ ಬೆಂಬಲಿಸುವ ವಿಶ್ವಾಸವಿದೆ. ಅಂತೆಯೇ ಇದು ಪಕ್ಷದ ಚಿಹ್ನೆಯ ಮೇಲೆ ನಡೆಯದಿರುವ ಚುನಾವಣೆಯಾದ್ದರಿಂದ ಎಲ್ಲಾ ಪಕ್ಷದವರನ್ನು ಬೆಂಬಲಿಸಲು ಕೋರಲಾಗಿದೆ ಎಂದು ತಿಳಿಸಿದರು.

ದಿ.ಅಪ್ಪಯ್ಯಣ್ಣನವರು ನೋವು ಅನುಭವಿಸಿದ್ದರು

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಯಾವುದೇ ಚುನಾವಣೆ ಬಂದರೂ ಜೆಡಿಎಸ್ ವಿಶೇಷ ಪಾತ್ರ ವಹಿಸುತ್ತದೆ. ಈ ಹಿಂದೆ ಬಮೂಲ್ ಚುನಾವಣೆಯಲ್ಲಿ ದಿ.ಅಪ್ಪಯ್ಯಣ್ಣನವರು ನೋವು ಅನುಭವಿಸಿದ್ದರು. ಆ ನೋವಿನಿಂದ ಹೊರ ಬರಲು ಒಮ್ಮತವಾಗಿ ಹುಸ್ಕೂರ್ ಆನಂದ್ ಅವರನ್ನು ಆಯ್ಕೆ ಮಾಡಿದ್ದೇವೆ, ಇದಕ್ಕೆ ಕಾರಣ ಕರ್ತರಾದವರಿಗೆ ಧನ್ಯವಾದಗಳು ಎಂದರು.

ಹುಸ್ಕೂ‌ರ್ ಆನಂದ್‌ ಸ್ಪರ್ಧೆ ಮಾಡುವುದಕ್ಕೆ ಯಾರೆಲ್ಲಾ ತೊಂದರೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ, ಮತದಾನ ಮಾಡುವವರು ರೈತರು. ಅವರ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಇನ್ನೂ ಕೇವಲ 96 ಗಂಟೆ ಬಾಕಿ ಇದೆ. ಮಾಡಬೇಕಾದ ಕೆಲಸ ಮಾಡಬೇಕಾಗಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ಮುಖಂಡರು ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕುರಿತು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೆಲ್ಲುವ ವಿಶ್ವಾಸ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಜಿ.ವಿಜಯಕುಮಾರ್ ಮಾತನಾಡಿ, ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹುಸ್ಕೂರು ಆನಂದ್ ಅವರು, ಸಮರ್ಥ ಅಭ್ಯರ್ಥಿಯಾಗಿದ್ದು, ಬಮೂಲ್ ಮತದಾರರು ಬೆಂಬಲಿಸಲಿದ್ದು, ಗೆಲ್ಲುವ ವಿಶ್ವಾಸವಿದೆ ಎಂದರು

ಪಿತೂರಿ

ಬಮೂಲ್ ಅಭ್ಯರ್ಥಿ ಹುಸ್ಕೂರು ಆನಂದ್.ಟಿ ಮಾತನಾಡಿ, ಕೆಲವರು ಬೇಕೆಂದಲೇ ನನ್ನ ಮೇಲೆ ಪಿತೂರಿ ನಡೆಸಿ, ದೂರು ದಾಖಲಿಸಿದ್ದರು. ಆದರೆ ಸ್ಪರ್ಧಿಸಲು ನ್ಯಾಯಾಲಯ ಆದೇಶ ನೀಡಿದೆ.

ನನ್ನನ್ನು ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರಿಗೆ ಅಭಾರಿಯಾಗಿದ್ದು, ನಿರ್ದೇಶಕನಾಗಿ ಆಯ್ಕೆಯಾದರೆ ಅಭಿವೃದ್ದಿ ಕೆಲಸಗಳನ್ನು ಮಾಡಲು ಯೋಜನೆ ರೂಪಿಸಿದ್ದೇನೆ ಎಂದರು.

ನನ್ನ ಗೆಲುವಿಗೆ ಎಲ್ಲರು ಸಹಕರಿಸಬೇಕು. ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲು ಯೋಜನೆ ನಿರೂಪಿಸಿದ್ದೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಹಿರಿಯ ಮುಖಂಡ ಎ.ನರಸಿಂಹಯ್ಯ, ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ದೊಡ್ಡಬಳ್ಳಾಪುರ ನಗರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ಬೆಂ.ಗ್ರಾ ಮಹಿಳಾ ವಕ್ತಾರೆ ಶಶಿಕಲಾ, ದೊಡ್ಡಬಳ್ಳಾಪುರ ತಾಲೂಕು ವಕ್ತಾರ ಕುಂಟನಹಳ್ಳಿ ಮಂಜುನಾಥ್, ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ ಚಾರಿ, ಮಧುರೆ ಹೋಬಳಿ ಜೆಡಿಎಸ್ ಅಧ್ಯಕ್ಷ ರಂಗಸ್ವಾಮಿ, ಬೆಳವಂಗಲ ಹೋಬಳಿ ಅಧ್ಯಕ್ಷ ಸತೀಶ್, ಸಾಸಲು ಹೋಬಳಿ ಅಧ್ಯಕ್ಷ ಸಿದ್ದಪ್ಪ, ಟಿಎಪಿಎಂಸಿಎಸ್ ಉಪಾಧ್ಯಕ್ಷ ಕಂಚಿಗಮಾಳ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಅಶ್ವಥ್ ನಾರಾಯಣ, ಮುಖಂಡರಾದ ಹಾಡೋನಹಳ್ಳಿ ನಾಗರಾಜ್, ರಾಜಗೋಪಾಲ್, ರಂಗಸ್ವಾಮಿ, ಹಾಡೋನಹಳ್ಳಿ ನಾರಾಯಣಪ್ಪ, ಕೊಡಿಗೇಹಳ್ಳಿ ಕೆಂಪೇಗೌಡ ಮತ್ತಿತರರಿದ್ದರು.

ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್

ಬಮೂಲ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದಿಂದ ತನ್ನ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ನಾಳೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ.

ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್ ಅವರಿಗೆ ಬೆಂಬಲ ಘೋಷಿಸುವ ಸಾಧ್ಯತೆ ಇದೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!