ಅಥಣಿ: ಸೊಸೆಗೆ (Daughter-in-law) ಮಕ್ಕಳಾಗಲಿಲ್ಲ ಎಂದು ಅತ್ತೆಯೇ (Mother-in-law) ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಾಬಾದ್ ಗ್ರಾಮದಲ್ಲಿ ನಡೆದಿದೆ.
ಮಲಾಬಾದ್ ಗ್ರಾಮದ ರೇಣುಕಾ ಸಂತೋಷ ಹೊನ ಕಾಂಡೆ (27 ವರ್ಷ) ಕೊಲೆಯಾದ ಮೃತ ದುರ್ದೈವಿ.
ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನ ಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.