Police should act sensitively; H.D. Kumaraswamy

ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ!!: ಡಿಸಿಎಂ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ.

ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು..? ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌.. ಬ್ರ್ಯಾಂಡ್‌.. ಎಂದು ಭಜನೆ ಮಾಡುತ್ತಿದ್ದೀರಲ್ಲ.. ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ!! ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು! ಜನರ ಮೇಲೆ ತೆರಿಗೆ ಮೇಲೆ ತೆರಿಗೆ! ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ ಎಂದು ಆರೋಪಿಸಿದ್ದಾರೆ.

ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ʼಪೋರ್ಟ್‌ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್‌ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ , ಓದಿಕೊಳ್ಳಿ ಎಂದಿರುವ ಅವರು; ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ್ಯಾಂಡಿಗೆ ಜನ ಅದೇ ನೀರು ಬಿಟ್ಟಾರು! ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]